2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ

ಮುಂದಿನ‌ ಐದು ವರ್ಷ ನಿಖಿಲ್​​ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, 2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ನಾನು ಮುಂದುವರಿಯುತ್ತೇನೆ ಎಂದಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
Follow us
TV9 Web
| Updated By: Rakesh Nayak Manchi

Updated on: Sep 22, 2023 | 5:20 PM

ನವದೆಹಲಿ, ಸೆ.22: ಲೋಕಸಭಾ ಚುನಾವಣೆ 2024 (Lok Sabha Elections) ರಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಮುಂದಿನ‌ ಐದು ವರ್ಷ ನಿಖಿಲ್​​ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ (H.D.Kumaraswamy) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಜೊತೆ ನಿಖಿಲ್ ಕೂಡ ದೆಹಲಿಗೆ ತೆರಳಿದ್ದಾರೆ. ಅದರಂತೆ ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ‘ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು’: ನಿಖಿಲ್​ ಕುಮಾರಸ್ವಾಮಿ

ಮುಂದಿನ‌ ಐದು ವರ್ಷ ನಿಖಿಲ್​​ ಕುಮಾರಸ್ವಾಮಿಯನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದಾಗಿ ಈ ಹಿಂದೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ನಿಖಿಲ ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ ಅದನ್ನೇ ಮುಂದುವರೆಸಲಿ. ಈಗಾಗಲೇ ಮೂರು ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಮುಂದೆ ಬಂದಿವೆ ಎಂದು ಹೇಳಿದ್ದರು.

ಹೀಗಾಗಿ ನಿಖಿಲ್ ರಾಜಕೀಯದಿಂದ ದೂರ ಉಳಿಯಲಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಕಾರ್ಯಕರ್ತರು, ಬೆಂಬಲಿಗರು ಗೊಂದಲಕ್ಕೀಡಾಗಿದ್ದರು. ಹೀಗಾಗಿ ಸ್ಪಷ್ಟನೆ ನೀಡಿದ ನಿಖಿಲ್, ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದೇನೆ ಎಂಬ ಭಾವನೆ ಬೇಡ ಎಂದು ಟ್ವೀಟ್ ಮಾಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್