ನವದೆಹಲಿ, ಸೆ.22: ಲೋಕಸಭಾ ಚುನಾವಣೆ 2024 (Lok Sabha Elections) ರಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿಯನ್ನು ಕರೆತರುವ ಪ್ರಶ್ನೆಯೇ ಇಲ್ಲ ಎಂದು ಹೆಚ್ಡಿ ಕುಮಾರಸ್ವಾಮಿ (H.D.Kumaraswamy) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ನಿಖಿಲ್ ಈ ಹೇಳಿಕೆಯನ್ನು ನೀಡಿದ್ದಾರೆ.
ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಕುಮಾರಸ್ವಾಮಿ ಜೊತೆ ನಿಖಿಲ್ ಕೂಡ ದೆಹಲಿಗೆ ತೆರಳಿದ್ದಾರೆ. ಅದರಂತೆ ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ‘ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು’: ನಿಖಿಲ್ ಕುಮಾರಸ್ವಾಮಿ
ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿಯನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್ಗೆ ಹೇಳಿದ್ದಾಗಿ ಈ ಹಿಂದೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ನಿಖಿಲ ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ ಅದನ್ನೇ ಮುಂದುವರೆಸಲಿ. ಈಗಾಗಲೇ ಮೂರು ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಮುಂದೆ ಬಂದಿವೆ ಎಂದು ಹೇಳಿದ್ದರು.
ಹೀಗಾಗಿ ನಿಖಿಲ್ ರಾಜಕೀಯದಿಂದ ದೂರ ಉಳಿಯಲಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಕಾರ್ಯಕರ್ತರು, ಬೆಂಬಲಿಗರು ಗೊಂದಲಕ್ಕೀಡಾಗಿದ್ದರು. ಹೀಗಾಗಿ ಸ್ಪಷ್ಟನೆ ನೀಡಿದ ನಿಖಿಲ್, ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದೇನೆ ಎಂಬ ಭಾವನೆ ಬೇಡ ಎಂದು ಟ್ವೀಟ್ ಮಾಡಿದ್ದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ