ಬೆಳಗಾವಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರಷ್ಟು ಗೆಲ್ಲುತ್ತೇನೆ: ಜಗದೀಶ್ ಶೆಟ್ಟರ್

ಬೆಳಗಾವಿಯಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ, ನಾನು ಸ್ಪರ್ಧಿಸುತ್ತೇನೆ. ನಾನು ಈಗಾಗಲೇ ಬೆಳಗಾವಿ ನಾಯಕರ ಜೊತೆ ಮಾತಾಡಿದ್ದೇನೆ. ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಜತೆ ಮಾತಾಡಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೂ ಮಾತನಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಬೆಳಗಾವಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರಷ್ಟು ಗೆಲ್ಲುತ್ತೇನೆ: ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
Edited By:

Updated on: Mar 15, 2024 | 6:35 PM

ಹುಬ್ಬಳ್ಳಿ, ಮಾರ್ಚ್​​ 15: ಬೆಳಗಾವಿ ಕ್ಷೇತ್ರದಲ್ಲಿ ನಾನು ನೂರಕ್ಕೆ ನೂರಷ್ಟು ಗೆಲ್ಲುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ನಾಯಕರ ಜೊತೆ ಚರ್ಚಿಸಿ ಬೆಂಗಳೂರನಿಂದ ವಾಪಸ್ ಹುಬ್ಬಳ್ಳಿಯ ನಿವಾಸಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವೆ. ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ನನ್ನ ಜೊತೆ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿಯಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ, ನಾನು ಸ್ಪರ್ಧಿಸುತ್ತೇನೆ. ನಾನು ಈಗಾಗಲೇ ಬೆಳಗಾವಿ ನಾಯಕರ ಜೊತೆ ಮಾತಾಡಿದ್ದೇನೆ. ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಜತೆ ಮಾತಾಡಿದ್ದೇನೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗೂ ಮಾತನಾಡಿದ್ದೇನೆ. ಅಧಿಕೃತವಾಗಿ ಅಭ್ಯರ್ಥಿ ಘೋಷಿಸಿದ ನಂತರ ತಯಾರಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಧಾರವಾಡ, ಹಾವೇರಿ ಕ್ಷೇತ್ರಗಳ ಬಿಜೆಪಿ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್ ಗೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಎದುರಾಯಿತೇ?

ಕೆಎಸ್​​ ಈಶ್ವರಪ್ಪ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ವರಿಷ್ಠರು ಸಮಾಧಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮೇಲೆ ಸುಮ್ನೆ ಸುಳ್ಳು ಕೇಸ್ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಸುಳ್ಳು ಕೇಸ್ ದಾಖಲೆ ಮಾಡಿದ್ದಾರೆ. ಅದು ಫಾಲ್ಸ್ ಕೇಸ್. ಯಡಿಯೂರಪ್ಪ ಆ ಕೇಸ್​ನಿಂದ ಹೊರಗೆ ಬರುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಕಿಡಿಕಿಡಿ

ಇನ್ನು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಜಗದೀಶ್ ಶೆಟ್ಟರ್​ ವಾಪಸ್ಸಾಗಿದ್ದಾರೆ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಇಲ್ಲವೇ ಹಾವೇರಿ ಕ್ಷೇತ್ರದ ಟಿಕೆಟ್ ಸಿಗುವ ಭರವಸೆಯಲ್ಲಿ ಇದ್ದರು. ಆದರೆ ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಅವರು ಬೆಳಗಾವಿ ಕ್ಷೇತ್ರದ ಟಿಕೆಟ್  ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದರು.

ಬೆಳಗಾವಿಯಲ್ಲಿ ಸ್ಪರ್ಧಿಸಲು ಶೆಟ್ಟರ್​ಗೆ ನಮ್ಮ ನಾಯಕರು ಹೇಳಿದ್ದಾರೆ: ಪ್ರಲ್ಹಾದ್​ ಜೋಶಿ 

ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯಿಸಿದ್ದು, ಬೆಳಗಾವಿಯಲ್ಲಿ ಸ್ಪರ್ಧಿಸಲು ಶೆಟ್ಟರ್​ಗೆ ನಮ್ಮ ನಾಯಕರು ಹೇಳಿದ್ದಾರೆ. ನಾನು ಶೆಟ್ಟರ್ ಜತೆ ಮಾತಾಡಿಲ್ಲ, ಪ್ರದೀಪ್ ಜೊತೆ ಮಾತನಾಡಿದ್ದೇನೆ. ಇನ್ನೆರಡು ದಿನಗಳಲ್ಲಿ‌ ಬಹುತೇಕ ಎಲ್ಲಾ ಕಡೆ ಟಿಕೆಟ್ ಫೈನಲ್ ಆಗುತ್ತೆ. ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us