AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangala Angadi: ಪತಿ ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ; ಸಂಸದೆ ಮಂಗಳಾ ಅಂಗಡಿ

Belagavi Bypoll 2021: ಗೋಕಾಕ್ ನನಗೆ ತವರು ಮನೆ, ಅಲ್ಲಿಯ ಮತದಾರರು ಮನೆ‌ಮಗಳನ್ನು ಬಿಟ್ಟುಕೊಡಲಿಲ್ಲ. ಬೆಳಗಾವಿ ದಕ್ಷಿಣ ಕ್ಷೇತ್ರದ ಜನರು ಹೆಚ್ಚು ಮತ ನೀಡಿದ್ದು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ಹೇಳಿದರು.

Mangala Angadi: ಪತಿ ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ; ಸಂಸದೆ ಮಂಗಳಾ ಅಂಗಡಿ
ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ
guruganesh bhat
|

Updated on:May 02, 2021 | 8:56 PM

Share

ಬೆಳಗಾವಿ: ಸುರೇಶ್ ಅಂಗಡಿಯವರ ಯೋಜನೆಗಳನ್ನು ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅವರಂತೆಯೇ ಕೆಲಸ ಮಾಡುತ್ತೇನೆ.  ಪ್ರಧಾನಿ ನರೇಂದ್ರ ಮೋದಿ ಸೇರಿ ಎಲ್ಲಾ ಬಿಜೆಪಿ ನಾಯಕರು, ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ವಿಜೇತ ಅಭ್ಯರ್ಥಿ ಮಂಗಳಾ ಅಂಗಡಿ ತಿಳಿಸಿದರು.

ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಮತದಾರರಿಗೆ ಧನ್ಯವಾದ ತಿಳಿಸಿದ ಮಂಗಳಾ ಅಂಗಡಿ, ಒಂದು ಮತದಿಂದ ಗೆದ್ದರೂ ಸಹ ಅದು ಗೆಲುವೇ ಆಗಿತ್ತು. ಕೊವಿಡ್ ಇರುವುದರಿಂದ ಮತದಾನ ಕಡಿಮೆಯಾಗಿದೆ. ಹೀಗಾಗಿ ಬಿಜೆಪಿಗೆ ಮತಗಳು ಕಡಿಮೆ ಬಂದಿದೆ. ಗೋಕಾಕ್ ನನಗೆ ತವರು ಮನೆ, ಅಲ್ಲಿಯ ಮತದಾರರು ಮನೆ‌ಮಗಳನ್ನು ಬಿಟ್ಟುಕೊಡಲಿಲ್ಲ. ಬೆಳಗಾವಿ ದಕ್ಷಿಣ ಕ್ಷೇತ್ರದ ಜನರು ಹೆಚ್ಚು ಮತ ನೀಡಿದ್ದು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ಹೇಳಿದರು.

ಬೆಳಗಾವಿ ಬೈಎಲೆಕ್ಷನ್​ನಲ್ಲಿ ಜಯ ಗಳಿಸಿದ ಮಂಗಳಾ ಅಂಗಡಿ ಚುನಾವಣಾ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಸಂಸದರಾಗಿ ಆಯ್ಕೆಯಾದ ಪ್ರಮಾಣ ಪತ್ರ ಸ್ವೀಕರಿಸಿದರು.

ಮಂಗಳಾ ಅಂಗಡಿಗೆ ರೋಚಕ ಗೆಲುವು ಬೆಳಗಾವಿ ಬೈಎಲೆಕ್ಷನ್​ನಲ್ಲಿ ಬಿಜೆಪಿ​ ಅಭ್ಯರ್ಥಿ ಮಂಗಳಾ ಅಂಗಡಿ 3,986 ಮತಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದ್ದಾರೆ. 4,36,868 ಮತಗಳನ್ನು ಪಡೆದಿರುವ ಮಂಗಳಾ ಅಂಗಡಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿದ್ದು, ಸತೀಶ್ ಜಾರಕಿಹೊಳಿ 4,32,882 ಮತಗಳನ್ನು ಪಡೆದಿದ್ದಾರೆ. ಎಂಇಎಸ್​ಗೆ 1,16,923 ಮತಗಳು ಚಲಾವಣೆಯಾಗಿದ್ದು, ಭರ್ಜರಿ ಪೈಪೋಟಿ ನೀಡಿದೆ.

ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಿಜೇತ ಅಭ್ಯರ್ಥಿ ಮಂಗಳಾ ಅಂಗಡಿ, ‘ಇದು ನನ್ನ ಗೆಲುವಲ್ಲ, ಬಿಜೆಪಿ ಕಾರ್ಯಕರ್ತರ ಗೆಲುವು. ಬಿಜೆಪಿ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮತ ನೀಡಿದ್ದಾರೆ. ಬೆಳಗಾವಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ’ ಎಂದು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ದಿವಂಗತ ಸುರೇಶ್ ಅಂಗಡಿ ಕನಸಿನಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

89ನೇ ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಗೆಲುವು 3986ಮತಗಳಿಂದ ಗೆಲುವು ಪಡೆದಿದ್ದಾರೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 37,733 ಜನರಿಗೆ ಕೊರೊನಾ ಸೋಂಕು, 217 ಮಂದಿ ಸಾವು

ಮಸ್ಕಿ ಕ್ಷೇತ್ರದಲ್ಲಿ ಒಗ್ಗಟ್ಟಿನ ಹೋರಾಟದಿಂದ ಗೆದ್ದಿದ್ದೇವೆ; ಬಸನಗೌಡ ತುರವಿಹಾಳ್

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

(I work like my husband Suresh Angadi says Belagavi new MP Mangala Angadi by elections 2021)

Published On - 8:49 pm, Sun, 2 May 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ