ನಾನೇನಾದ್ರು ದಾಖಲೆ ತಂದಿದ್ರೆ ರಾಜೀನಾಮೆ ಕೊಡ್ತೀನಿ: ಸಚಿವ ಭೈರತಿ ಸುರೇಶ್​ ಸವಾಲು

ಮುಡಾ ಪ್ರಕರಣದಲ್ಲಿ ವಿಶೇಷ ವಿಮಾನ, ಹೆಲಿಕಾಪ್ಟರ್​ನಲ್ಲಿ ದಾಖಲೆ ತಂದಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಸಚಿವ ಭೈರತಿ ಸುರೇಶ್​ ಪ್ರತಿಕ್ರಿಯಿಸಿದ್ದು, ನಾನೇನಾದರೂ ದಾಖಲೆಗಳನ್ನು ತಂದಿದ್ದರೆ ರಾಜೀನಾಮೆ ಕೊಡುತ್ತೇನೆ. ಒಂದು ವೇಳೆ ಇಲ್ಲ ಅಂದರೆ ಅವರು ಏನು ಮಾಡುತ್ತಾರೆ ಕೇಳಿ ಎಂದು ತಿರುಗೇಟು ನೀಡಿದ್ದಾರೆ.

ನಾನೇನಾದ್ರು ದಾಖಲೆ ತಂದಿದ್ರೆ ರಾಜೀನಾಮೆ ಕೊಡ್ತೀನಿ: ಸಚಿವ ಭೈರತಿ ಸುರೇಶ್​ ಸವಾಲು
ನಾನೇನಾದ್ರು ಮುಡಾ ದಾಖಲೆ ಹೊತ್ತುಕೊಂಡು ತಂದಿದ್ರೆ ರಾಜೀನಾಮೆ ಕೊಡ್ತೀನಿ: ಭೈರತಿ ಸುರೇಶ್​ ಸವಾಲು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 12, 2024 | 7:35 PM

ಬೆಂಗಳೂರು, ಜುಲೈ 12: ಮುಡಾ ಪ್ರಕರಣಕ್ಕೆ (Muda Case) ಸಂಬಂಧಿಸಿದಂತೆ ವಿಶೇಷ ವಿಮಾನ, ಹೆಲಿಕಾಪ್ಟರ್​ನಲ್ಲಿ ನಾನೇನಾದರೂ ದಾಖಲೆ ತಂದಿದ್ದರೆ ರಾಜೀನಾಮೆ ಕೊಡುತ್ತೇನೆ. ಇಲ್ಲ ಅಂದರೆ ಅವರು ಏನು ಮಾಡುತ್ತಾರೆ ಕೇಳಿ ಎಂದು ಸಚಿವ ಭೈರತಿ ಸುರೇಶ್ (Byrathi Suresh) ಸವಾಲು ಹಾಕಿದ್ದಾರೆ. ವಿಶೇಷ ವಿಮಾನ, ಹೆಲಿಕಾಪ್ಟರ್​ನಲ್ಲಿ ದಾಖಲೆ ತಂದಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಭೈರತಿ ಸುರೇಶ್​ ಕಿಡಿಕಾರಿದ್ದು, ಯಾರು ದಾಖಲೆ ತರಲು ಆಗುತ್ತಾ ಎಂದು ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 20 ವರ್ಷದಿಂದ ತಪ್ಪುಗಳಾಗುತ್ತಾ ಬಂದಿದೆ. 2005ರವರೆಗಿನ ಎಲ್ಲ ವಿಚಾರ ತನಿಖೆಗೆ ಕೊಡಲು ಪ್ಲ್ಯಾನ್ ಮಾಡುತ್ತಿದ್ದೇನೆ. ಸುಮ್ಮ ಸುಮ್ಮನೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ? ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ತನಿಖಾಧಿಕಾರಿನಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಮುಡಾದವರೇ 62 ಕೋಟಿ ರೂ. ಹಣ ಕೊಡಬೇಕಂತೆ: ಹೆಚ್​ಡಿ ಕುಮಾರಸ್ವಾಮಿ

ಮುಡಾ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಐಎಎಸ್​ಅಧಿಕಾರಿಗಳಿಗೆ ಕೊಡದೆ ಬಿಜೆಪಿಗರಿಗೆ ಕೊಡಬೇಕಾ? ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಮುಚ್ಚಿ ಹಾಕಲ್ಲ, ಸರ್ಕಾರ ಯಾರನ್ನೂ ಬಿಡಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲ ಗೊತ್ತಾಗುತ್ತೆ ಎಂದು ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್​ನಲ್ಲಿ ಅವಸರದಿಂದ ಬಂದ ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಹೊತ್ತೊಯ್ದರು? ಕುಮಾರಸ್ವಾಮಿ

ಮುಡಾದಲ್ಲಿ ಹಗರಣವೇ ನಡೆದಿಲ್ಲ ಎಂದು ಇತ್ತೀಚಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದರು. ಹಗರಣ ನಡೆದಿಲ್ಲ ಎನ್ನುವುದಾದರೆ ಅಧಿಕಾರಿಗಳನ್ನು ಇಟ್ಟು ಯಾಕೆ ತನಿಖೆ ನಡೆಸುತ್ತಿದ್ದೀರಿ. ಹೆಲಿಕಾಷ್ಟರ್​ನಲ್ಲಿ ಹೋಗಿ ಯಾವ ದಾಖಲೆ ತುಂಬಿಕೊಂಡು ಬಂದಿರಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೈರತಿ ಸುರೇಶ್​ ವಿರುದ್ಧ ವಾಗ್ದಾಳಿ ಮಾಡಿದ್ದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜನಾಮೆಗೆ ಆಗ್ರಹಿಸಿ ಘೋಷಣೆಗಳನ್ನೇ ಕೂಗಿದ್ದಾರೆ. ಮಹಾರಾಜ ಕಾಲೇಜು ಮೈದಾನದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮುಡಾ ಕಚೇರಿಗೆ ಮುತ್ತಿಗೆ ಹಾಕುವುದಕ್ಕೆ  ಮುಂದಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 pm, Fri, 12 July 24

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ