AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳ ಎಸಿಎಸ್ ಆಗಿ ಐಎಎಸ್​ ಅಧಿಕಾರಿ ಅಂಜುಂ ಪರ್ವೇಜ್ ನೇಮಕ

ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಐಎಎಸ್ ಅಧಿಕಾರಿಯಾಗಿ ವೃತ್ತಿಜೀವನದ ಜೊತೆಗೆ ಅವರು ಕರ್ನಾಟಕದ ವಿವಿಧ ಇಲಾಖೆಗಳಿಗೆ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮುಖ್ಯಮಂತ್ರಿಗಳ ಎಸಿಎಸ್ ಆಗಿ ಐಎಎಸ್​ ಅಧಿಕಾರಿ ಅಂಜುಂ ಪರ್ವೇಜ್ ನೇಮಕ
Anjum Parvez
TV9 Web
| Edited By: |

Updated on:Jun 04, 2025 | 10:58 PM

Share

ಬೆಂಗಳೂರು, ಜೂನ್ 4: ಕರ್ನಾಟಕದ ಸಿಎಂ ಸಿದ್ದರಾಮಯ್ಯನವರ (Siddaramaiah) ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಆಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ (Anjum Parvez) ನೇಮಕಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಆರ್ ಡಿಪಿಆರ್ ಮತ್ತು ಅರಣ್ಯ ಇಲಾಖೆಯ ಎಸಿಎಸ್ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಅಂಜುಂ ಪರ್ವೇಜ್ ನಿರ್ವಹಿಸಲಿದ್ದಾರೆ. ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಐಎಎಸ್ ಅಧಿಕಾರಿಯಾಗಿ ವೃತ್ತಿಜೀವನದ ಜೊತೆಗೆ ಅವರು ಕರ್ನಾಟಕದ ವಿವಿಧ ಇಲಾಖೆಗಳಿಗೆ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ಕೇಡರ್ ಐಎಎಸ್​ ಅಧಿಕಾರಿಯಾಗಿರುವ ಅಂಜುಮ್ ಪರ್ವೇಜ್ ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಶ್ರೀಮಂತ ಮತ್ತು ವೈವಿಧ್ಯಮಯ ಅನುಭವ ಮತ್ತು ಜ್ಞಾನವನ್ನು ಹೊಂದಿದ್ದಾರೆ. ಅವರು ಕರ್ನಾಟಕ ಸರ್ಕಾರಕ್ಕೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವುಗಳಲ್ಲಿ ಪ್ರಧಾನ ಕಾರ್ಯದರ್ಶಿ (ಸಾರಿಗೆ), ವ್ಯವಸ್ಥಾಪಕ ನಿರ್ದೇಶಕ (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ಇತ್ಯಾದಿಗಳೂ ಸೇರಿವೆ. ಅಂಜುಮ್ ಪರ್ವೇಜ್ ಅವರು ಪ್ರತಿಷ್ಠಿತ ಐಐಟಿ, ದೆಹಲಿಯಿಂದ ಬಿ.ಟೆಕ್ ಮತ್ತು ಐಐಎಂ ಬೆಂಗಳೂರಿನಿಂದ ಪಿಜಿಪಿಎಂ ಪದವಿ ಪಡೆದಿದ್ದಾರೆ. ಅವರು 2023ರ ಜುಲೈ 1ರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೇ, ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನ ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್
Image
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
Image
Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 11 ಸಾವು
Image
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:44 pm, Wed, 4 June 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ