ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ, ತಾಯಿ ಕೊವಿಡ್​ಗೆ ಬಲಿ

ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು.

ಐಎಎಸ್ ಅಧಿಕಾರಿ ದೀಪಾ ಚೋಳನ್ ತಂದೆ, ತಾಯಿ ಕೊವಿಡ್​ಗೆ ಬಲಿ
ಐಎಎಸ್ ಅಧಿಕಾರಿ ದೀಪಾ ಚೋಳನ್ ಕುಟುಂಬ
Follow us
sandhya thejappa
|

Updated on: Jun 01, 2021 | 10:40 AM

ಬೆಂಗಳೂರು: ಐಎಎಸ್ ಅಧಿಕಾರಿಯಾದ ದೀಪಾ ಚೋಳನ್ರವರ ತಂದೆ ಮತ್ತು ತಾಯಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ದೀಪಾ ಚೋಳನ್ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ರಾಜೇಂದ್ರ ಚೋಳನ್ ಪತ್ನಿ. ಸದ್ಯ ಚೋಳನ್ ದಂಪತಿ ಕೊವಿಡ್ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದಾರೆ. 10 ದಿನದ ಅಂತರದಲ್ಲಿ ದೀಪಾ ಚೋಳನ್ ತಂದೆ ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್ ನಿರ್ವಹಣೆ ಹೊಣೆ ಹೊತ್ತಿದ್ದ ರಾಜೇಂದ್ರ ಚೋಳನ್ ಅತ್ತೆ, ಮಾವನ ಅಂತ್ಯಸಂಸ್ಕಾರಕ್ಕೂ ಹೋಗಲು ಸಾಧ್ಯವಾಗಲಿಲ್ಲ.

ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು. ರಾಜೇಂದ್ರ ಚೋಳನ್ ತಂದೆ ತಾಯಿಗೂ ಇದೀಗ ಕೊವಿಡ್ ಧೃಡಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ತವ್ಯದಲ್ಲಿರುವ ಕಾರಣ ರಾಜೇಂದ್ರ ಚೋಳನ್​ಗೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಕೊವಿಡ್​ಗೆ ತಾಯಿ, ಮಗ ಬಲಿ ತುಮಕೂರು: ತಾಲೂಕಿನ ಚಿಕ್ಕಕೊರಟಗೆರೆಯಲ್ಲಿ 13 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ. ಮೇ 18 ರಂದು 65 ವರ್ಷದ ಚಿಕ್ಕಮ್ಮ ಸಾವನ್ನಪ್ಪಿದ್ದಾರೆ. ಇಂದು (ಜೂನ್ 1) 43 ವರ್ಷದ ಮಗ ಕುಮಾರಸ್ವಾಮಿ ಕೂಡಾ ಕೊವಿಡ್​ಗೆ ಬಲಿಯಾಗಿದ್ದಾರೆ. ಕುಮಾರಸ್ವಾಮಿ ಪ್ರಸಿದ್ದ ಕೆಂಪಮ್ಮ ದೇವಿ ಅರ್ಚಕರಾಗಿದ್ದರು. ಸೋಂಕು ತಗುಲಿದ ಕುಮಾರಸ್ವಾಮಿ ಪತ್ನಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ

Coronavirus Cases in India: ದೇಶದಲ್ಲಿ 1.27 ಲಕ್ಷ ಹೊಸ ಕೊವಿಡ್ ಪ್ರಕರಣ, 2795 ಮಂದಿ ಸಾವು

ನಿವೃತ್ತ ಚಾಲಕನನ್ನು ಕೂರಿಸಿಕೊಂಡು ಕಾರು ಚಾಲನೆ; ಹೃದಯಸ್ಪರ್ಶಿ ಕೊಡುಗೆ ನೀಡಿದ ಕೊಪ್ಪಳ ತಹಶೀಲ್ದಾರ್

(IAS officer Deepa Cholan father and mother died due to corona)

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ