ಪಂಚಭೂತಗಳಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ
ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆ ರಾಮದುರ್ಗ ಬಳಿ ಇರುವ ಜಮೀನಿನಲ್ಲಿ ನೆರೆವೇರಿತು. ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು ನಾಲ್ವರ ಅಂತಿಮ ವಿಧಿ ವಿಧಾನವನ್ನು ಏಕ ಕಾಲಕ್ಕೆ ನಡೆಸಲಾಗಿದೆ. ಚಿತೆಗೆ ಮೃತದೇಹ ಇಡುವಾಗ ನೆರೆದಿದ್ದವರ ಆಕ್ರಂದನ ಮುಗಿಲು ಮುಟ್ಟಿತ್ತು. ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳು ಅಶ್ರುತರ್ಪಣ ಸಲ್ಲಿಸಿದರು.
ಬೆಳಗಾವಿ, ನವೆಂಬರ್ 26: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಬಳಿ ಇರುವ ಜಮೀನಿನಲ್ಲಿ ನೆರೆವೇರಿತು. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿ ಒಟ್ಟು ನಾಲ್ವರು ಅಸುನೀಗಿದ್ದು, ಮೃತರ ಅಂತ್ಯಕ್ರಿಯೆಯನ್ನ ಏಕಕಾಲಕ್ಕೆ ಜಮೀನಿನಲ್ಲಿ ನೆರವೇರಿಸಲಾಗಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದ್ದು, ಮಹಾಂತೇಶ್ ಬೀಳಗಿ ತಾಯಿ ಸಮಾಧಿ ಪಕ್ಕದಲ್ಲೇ ಅಂತಿಮಕಾರ್ಯ ನಡೆದಿದೆ. ಇದಕ್ಕೂ ಮುನ್ನ ರಾಮದುರ್ಗ ಪಟ್ಟಣದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪಂಚಗಟಿಮಠ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿಕೆ ಮಾಡಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
