ಪಂಚಭೂತಗಳಲ್ಲಿ ಐಎಎಸ್​ ಅಧಿಕಾರಿ ಮಹಾಂತೇಶ ಬೀಳಗಿ ಲೀನ: ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ

Edited By:

Updated on: Nov 26, 2025 | 6:39 PM

ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಐಎಎಸ್​ ಅಧಿಕಾರಿ ಮಹಾಂತೇಶ್​ ಬೀಳಗಿ ಅವರ ಅಂತ್ಯಕ್ರಿಯೆ ರಾಮದುರ್ಗ ಬಳಿ ಇರುವ ಜಮೀನಿನಲ್ಲಿ ನೆರೆವೇರಿತು. ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು ನಾಲ್ವರ ಅಂತಿಮ ವಿಧಿ ವಿಧಾನವನ್ನು ಏಕ ಕಾಲಕ್ಕೆ ನಡೆಸಲಾಗಿದೆ. ಚಿತೆಗೆ ಮೃತದೇಹ ಇಡುವಾಗ ನೆರೆದಿದ್ದವರ ಆಕ್ರಂದನ ಮುಗಿಲು ಮುಟ್ಟಿತ್ತು. ಕುಟುಂಬ, ಸ್ನೇಹಿತರು ಮತ್ತು ಸಹೋದ್ಯೋಗಿಗಳು ಅಶ್ರುತರ್ಪಣ ಸಲ್ಲಿಸಿದರು.

ಬೆಳಗಾವಿ, ನವೆಂಬರ್​​ 26: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಐಎಎಸ್​ ಅಧಿಕಾರಿ ಮಹಾಂತೇಶ್​ ಬೀಳಗಿ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಬಳಿ ಇರುವ ಜಮೀನಿನಲ್ಲಿ ನೆರೆವೇರಿತು. ಅಪಘಾತದಲ್ಲಿ ಮಹಾಂತೇಶ್​​ ಬೀಳಗಿ ಸೇರಿ ಒಟ್ಟು ನಾಲ್ವರು ಅಸುನೀಗಿದ್ದು, ಮೃತರ ಅಂತ್ಯಕ್ರಿಯೆಯನ್ನ ಏಕಕಾಲಕ್ಕೆ ಜಮೀನಿನಲ್ಲಿ ನೆರವೇರಿಸಲಾಗಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದ್ದು, ಮಹಾಂತೇಶ್​​ ಬೀಳಗಿ ತಾಯಿ ಸಮಾಧಿ ಪಕ್ಕದಲ್ಲೇ ಅಂತಿಮಕಾರ್ಯ ನಡೆದಿದೆ. ಇದಕ್ಕೂ ಮುನ್ನ ರಾಮದುರ್ಗ ಪಟ್ಟಣದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪಂಚಗಟಿಮಠ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ‌ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿಕೆ ಮಾಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More