ಕರ್ನಾಟಕದ ಅಮರನಾಥ ಯಾತ್ರಿಕರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

| Updated By: Rakesh Nayak Manchi

Updated on: Jul 08, 2023 | 8:26 PM

ಸಂಕಷ್ಟದಲ್ಲಿ ಕರ್ನಾಟಕದ ಅಮರನಾಥ ಯಾತ್ರಿಗಳ ನೆರವಿಗಾಗಿ ಐಎಎಸ್ ಅಧಿಕಾರಿ ರಶ್ಮಿ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದರು.

ಕರ್ನಾಟಕದ ಅಮರನಾಥ ಯಾತ್ರಿಕರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಅಮರನಾಥ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ
Follow us on

ಆನೇಕಲ್: ಕರ್ನಾಟಕದ ಅಮರನಾಥ(Amarnath Yatra 2023) ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೊಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಉತ್ತರಕಾಂಡದಲ್ಲಿ ಬಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕರ್ನಾಟಕ ಅಮರನಾಥ ಯಾತ್ರಿಗಳು ಸಂಕಷ್ಟದಲ್ಲಿದ್ದಾರೆ. ಇವರ ನೆರವಿಗಾಗಿ ಕಂದಾಯ ಇಲಾಖೆಯು ಐಎಎಸ್ ಅಧಿಕಾರಿ ರಶ್ಮಿ ಅವರನ್ನು ನಿಯೋಜನೆ ಮಾಡಿದೆ ಎಂದರು.

ಭಾರಿ ಮಳೆ ಹಿನ್ನೆಲೆ ಹೆಲಿಕಾಪ್ಟರ್ ಮತ್ತು ವಿಮಾನದ ಮೂಲಕ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಬೆಟ್ಟ ಗುಡ್ಡಗಳ ಕಡಿದಾದ, ದುರ್ಗಮ ಪ್ರದೇಶದಲ್ಲಿ ಯಾತ್ರಿಕರು ಸಿಲುಕಿದ್ದು, ಮಳೆ ಕಡಿಮೆಯಾದ ಬಳಿಕ ರಕ್ಷಣಾ ಕಾರ್ಯ ನಡೆಸಲಾಗುತ್ತದೆ. ಉತ್ತರಕಾಂಡ ರೀಜನಲ್ ಕಮಿಷನ್, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದನೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದರು.

ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಭಾರೀ ಮಳೆ ಹಿನ್ನೆಲೆ ಕಾಶ್ಮೀರ ಕಣಿವೆಯ ಬಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸತತ ಎರಡನೇ ದಿನವೂ ಸ್ಥಗಿತಗೊಳಿಸಲಾಗಿದೆ. ಅದರಂತೆ, ಜಮ್ಮುವಿನಿಂದ ಕಾಶ್ಮೀರಕ್ಕೆ ಯಾವುದೇ ಹೊಸ ಯಾತ್ರಾರ್ಥಿಗಳಿಗೆ ತೆರಳಲು ಅವಕಾಶವಿಲ್ಲ. ಹಿಲ್ಲರ್ ಅನಂತನಾಗ್ ರೈಲು ನಿಲ್ದಾಣದಲ್ಲಿ ನೀರು ನಿಂತಿದ್ದರಿಂದ ಖಾಜಿಗುಂಡ್ ಮತ್ತು ಬನಿಹಾಲ್ ನಡುವಿನ ರೈಲು ಸಂಚಾರಗಳನ್ನೂ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ನಿರಂತರ ಮಳೆಯಿಂದ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ: ಸಂಕಷ್ಟದಲ್ಲಿ ಗದಗ ಯಾತ್ರಿಕರು

ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಸಂಪರ್ಕ ಹೆದ್ದಾರಿ NH1 ಪಂಥಿಯಾಲ್ ಪ್ರದೇಶದಲ್ಲಿ ಭೂಕುಸಿತಗಳು ಉಂಟಾಗಿದ್ದು, ಯಾತ್ರಿಗಳ ಸಂಚಾರಕ್ಕೆ ಅಡಚಣೆ ಉಂಟುಮಾಡಿದೆ. ನಿರಂತರ ಮಳೆಯಿಂದಾಗಿ ಅನಂತನಾಗ್ ಜಿಲ್ಲೆಯ ನದಿಗಳು ಮತ್ತು ಕಾಲುವೆಗಳಲ್ಲಿ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ, ಇದರಿಂದಾಗಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಹಲವು ಸಂಪರ್ಕ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.

ಜಮ್ಮು ಮತ್ತು ಕಾಶ್ಮೀರದಾದ್ಯಂತ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 10 ರಿಂದ ಜುಲೈ 14 ರವರೆಗೆ ಇದು ಮುಂದುವರಿಯಲಿದೆ. ಹಿಮಪಾತವೂ ಸಂಭವಿಸುವ ಸಾಧ್ಯತೆಯೂ ಇದೆ ಎಂದು ಎಚ್ಚರಿಕೆ ನಿಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ