Rohini Vs Roopa: ಸಾಲು ಸಾಲು ಆರೋಪ ಮಾಡಿದ ರೂಪಾ ವಿರುದ್ಧ ಕಾನೂನು ಸಮರಕ್ಕಿಳಿದ ರೋಹಿಣಿ, IPS ಅಧಿಕಾರಿಗೆ ಲೀಗಲ್​ ನೋಟಿಸ್!

ಸಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿರುವ ಡಿ ರೂಪಾ ಮೌದ್ಗಿಲ್​ ವಿರುದ್ಧ ರೋಹಿಣಿ ಸಿಂಧೂರಿ ಕಾನೂನು ಹೋರಾಟಕ್ಕಿಳಿದಿದ್ದಾರೆ.

Rohini Vs Roopa: ಸಾಲು ಸಾಲು ಆರೋಪ ಮಾಡಿದ ರೂಪಾ ವಿರುದ್ಧ ಕಾನೂನು ಸಮರಕ್ಕಿಳಿದ ರೋಹಿಣಿ, IPS ಅಧಿಕಾರಿಗೆ ಲೀಗಲ್​ ನೋಟಿಸ್!
ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ
Follow us
ರಮೇಶ್ ಬಿ. ಜವಳಗೇರಾ
|

Updated on:Feb 22, 2023 | 10:37 PM

ಬೆಂಗಳೂರು: ಅತ್ತ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್(d roopa moudgil) ನಿರಂತರವಾಗಿ ಆರೋಪಗಳನ್ನು ಮಾಡುತ್ತಿದ್ದರೆ, ಇತ್ತ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (rohini sindhuri), ರೂಪಾ ವಿರುದ್ಧ ಕಾನೂನು ಸಮರ ಸಾರಿದ್ದಾರೆ. ರೂಪಾ ವಿರುದ್ಧ ನಿರ್ಬಂಧಕಾಜ್ಞೆ ವಿಧಿಸುವಂತೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ರೋಹಿಣಿ ಸಿಂಧೂರಿ ತಮ್ಮ ಪರ ವಕೀಲರ ಮೂಲಕ ರೂಪಾಗೆ ಲೀಗಲ್ ನೋಟಿಸ್(legal notice) ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Rohini Vs Roopa: ರೂಪಾ ವಿರುದ್ಧ ಕೋರ್ಟ್​​​​ಗೆ ರೋಹಿಣಿ ಸಿಂಧೂರಿ ಅರ್ಜಿ, ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಹೌದು.. ಸಾಮಾಜಿಕ ಜಾಲತಾಣಗಳಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವೈಯಕ್ತಿ ಫೋಟೋಗಳನ್ನು ಹರಿಬಿಟ್ಟು ಸಾಲು ಸಾಲು ಆರೋಪಗಳನ್ನು ಮಾಡಿರುವ ಐಪಿಎಸ್​ ಡಿ. ರೂಪಾಗೆ ಲೀಗಲ್‌ ನೋಟಿಸ್‌ ನೀಡಲಾಗಿದೆ. ರೋಹಿಣಿ ಸಿಂಧೂರಿ ಅವರು ತಮ್ಮ ಪರ ವಕೀಲ ಸಿವಿ ನಾಗೇಶ್‌ ಮೂಲಕ ಲೀಗಲ್‌ ನೋಟಿಸ್‌ ನಿಡಿದ್ದಾರೆ. ಈ ನೋಟಿಸ್‌ ತಲುಪಿದ 24 ಗಂಟೆಯ ಒಳಗಾಗಿ ರೂಪಾ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 1 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ನೋಟಿಸ್​ನಲ್ಲಿ 21 ಅಂಶಗಳನ್ನು ಉಲ್ಲೇಖಿಸಿ ರೂಪಾ ಅವರ ಮನೆ ಹಾಗೂ ಕೆಲಸದ ಸ್ಥಳದ ವಿಳಾಸಕ್ಕೆ ಕಳುಹಿಸಿದ್ದಾರೆ. ಅದರೊಂದಿಗೆ ತಮ್ಮ ಫೇಸ್‌ಬುಕ್‌ ಪೇಜ್​ನಲ್ಲಿ ಹಂಚಿಕೊಂಡಿರುವ ಮಾನಹಾನಿಕರ ಮೆಸೇಜ್‌ಗಳು ಹಾಗೂ ಚಿತ್ರವನ್ನು ತಕ್ಷಣವೇ ಡಿಲೀಟ್‌ ಮಾಡಬೇಕು. ಹಾಗೇ ಕ್ಷಮೆಯಾಚಿಸಬೇಕೆಂದು ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿಯವರ ವೈಯಕ್ತಿ ಫೋಟೋ ಏಕೆ ಹಾಕಿದ್ದೀರಿ ಎಂದು ಪ್ರಶ್ನಿಸಿದವರಿಗೆ ರೂಪಾ ಕೊಟ್ಟ ಉತ್ತರ ಹೀಗಿದೆ

ಡಿ.ರೂಪಾ ಅವರು ಲಿಖಿತ ರೂಪದಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಅದಕ್ಕೂ ಮುನ್ನ ಮಾನಹಾನಿಕರ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಬೇಕು. 1 ಕೋಟಿ ರೂಪಾಯು ಮಾನನಷ್ಟ ಮೊಕದ್ದಮೆಯೊಂದಿಗೆ ಈ ನೋಟಿಸ್‌ ನೀಡಲು ಖರ್ಚಾಗಿರುವ 50 ಸಾವಿರ ರೂಪಾಯಿಯನ್ನು ರೂಪಾ ಅವರೇ ಭರಿಸಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.ಇಲ್ಲದಿದ್ದರೆ 1 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹಾಕುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ರೂಪಾ ಮುಂದೆ ಯಾವ ಹೆಜ್ಜೆ ಇಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 10:27 pm, Wed, 22 February 23

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್