ಪತಿ ನಿವೃತ್ತಿ ಬೆನ್ನಲ್ಲೇ ಪತ್ನಿಗೆ ಹುದ್ದೆ; ಕರ್ನಾಟಕದ ಮುಂದಿನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಕಾರ್ಯದರ್ಶಿ ಯಾರು ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಪತಿ ರಜನೀಶ್ ಗೋಯೆಲ್ ನಿವೃತ್ತಿ ಬೆನ್ನಲ್ಲೇ ಪತ್ನಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿಯಾಗುವುದು ಖಚಿತವಾಗಿದೆ. ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ ರಾಜ್ಯದ ಉನ್ನತ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ ದಂಪತಿ ಎಂಬ ಹೆಗ್ಗಳಿಕೆ ಶಾಲಿನಿ ರಜನೀಶ್ ಮತ್ತು ರಜನೀಶ್ ಗೋಯೆಲ್ ಅವರದ್ದಾಗಲಿದೆ.
ಬೆಂಗಳೂರು, (ಜುಲೈ 26): ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ರಜನೀಶ್ ಪತ್ನಿ ಶಾಲಿನಿ ರಜನೀಶ್ ಅವರು ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಇಂದು (ಜುಲೈ 26) ನಡೆದ ಸಚಿವ ಸಂಪುಟದಲ್ಲಿ ಶಾಲಿನಿ ರಜನೀಶ್ರನ್ನು ಸರ್ಕಾರದ ಸಿಎಸ್ ಆಗಿ ಮಾಡಲು ತೀರ್ಮಾನಿಸಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ H.K.ಪಾಟೀಲ್ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಕೆ ಪಾಟೀಲ್, ಹಾಲಿ ಸಿಎಸ್ (ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ) ರಜನೀಶ್ ಗೋಯಲ್ 5 ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿಗೆ ದಕ್ಕಿದೆ.
ರಾಜ್ಯ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜ್ಯೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಸೇಠ್, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್ ಅವರ ಹೆಸರುಗಳು ಕೇಳಿಬಂದಿದ್ದವು. ಆದ್ರೆ, ಇಬ್ಬರ ಪೈಕಿ ಶಾಲಿನಿ ರಜನೀಶ್ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಶಾಲಿನಿ ರಜನೀಶ್ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗುವುದು ಖಚಿತವಾಗಿದೆ. 1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರು 2027ರ ಜೂನ್ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.
ಇನ್ನು ಮುಖ್ಯ ಕಾರ್ಯದರ್ಶಿ ಹುದ್ದೆಗೇರಿದರೆ ದಂಪತಿಯ ಸಾಲಿಗೆ ರಜನೀಶ್ ಗೋಯೆಲ್, ಶಾಲಿನಿ ರಜನೀಶ್ ಸೇರಿದ್ದಾರೆ. ಈ ಹಿಂದೆ ಬಿಕೆ ಭಟ್ಟಾಚಾರ್ಯ ಹಾಗೂ ತೆರೆಸಾ ಭಟ್ಟಾಚಾರ್ಯ ದಂಪತಿ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ