AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗಲು ಬಿಡುವುದಿಲ್ಲ’; ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ರೆಸ್ಯೂಮ್​ನಲ್ಲಿ ಮಾತೃಭಾಷೆ ಕನ್ನಡ ಎಂದು ನಮೂದಿಸಿದರೆ ಕೆಲಸ ಸಿಗುತ್ತಿಲ್ಲ. ತಮಿಳು, ತೆಲುಗು, ಹಿಂದಿ ಭಾಷೆಯವರನ್ನು ಹೆಚ್ಚಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಯುವತಿಯ ವಿಡಿಯೋ ಭಾರೀ ಸದ್ದು ಮಾಡಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು ಅವಕಾಶಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸರ್ಕಾರ ಅವಕಾಶ ನೀಡುವುದಿಲ್ಲ. ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದೆ.

'ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯವಾಗಲು ಬಿಡುವುದಿಲ್ಲ'; ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ
Dk Shivakumar (1)
ಸುಷ್ಮಾ ಚಕ್ರೆ
|

Updated on: Oct 25, 2026 | 5:05 PM

Share

ಬೆಂಗಳೂರು, ಅಕ್ಟೋಬರ್ 25: ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ, ಅವಕಾಶ ಕಡೆಗಣಿಸಲು ಅವಕಾಶ ನೀಡುವುದಿಲ್ಲ. ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಉದ್ದೇಶಪೂರ್ವಕವಾಗಿ ಕಡೆಗಣಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಡಿ.ಕೆ. ಶಿವಕುಮಾರ್, ‘ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂಬ ದೂರು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಈ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜಗತ್ತು ಬೆಂಗಳೂರನ್ನು ತಂತ್ರಜ್ಞಾನದ ರಾಜಧಾನಿಯಾಗಿ ನೋಡುತ್ತಿದೆ. ಕನ್ನಡಿಗರ ಪ್ರತಿಭೆ, ಕೌಶಲ್ಯ, ಸಾಮರ್ಥ್ಯದ ಬಗ್ಗೆ ನಮಗೆ ಹೆಮ್ಮೆಯಿದೆ. ಕನ್ನಡಿಗರನ್ನು ಯಾವುದೇ ಖಾಸಗಿ ಸಂಸ್ಥೆ ಉದ್ದೇಶಪೂರ್ವಕವಾಗಿ ಕಡೆಗಣಿಸಿರುವುದು ಕಂಡುಬಂದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸದಾ ಬದ್ಧವಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಂದಿಧ್ವಜ ಪೂಜೆ ವೇಳೆ ಸಚಿವರನ್ನೇ ತಡೆದ ಪ್ರಕರಣ: ವಿಚಾರಣೆ ನಡೆಸಿ ವರದಿ ನೀಡುವಂತೆ ಸಿಎಸ್​​ಗೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ

ಏನಿದರ ಹಿನ್ನೆಲೆ:

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಬಗ್ಗೆ ಪೋಸ್ಟ್ ಮಾಡಲು ಕಾರಣವೂ ಇದೆ. ನಿನ್ನೆಯಷ್ಟೇ ಬೆಂಗಳೂರಿನ ಯುವತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಮಾತೃಭಾಷೆ ಕನ್ನಡ ಎಂದು ಉಲ್ಲೇಖಿಸಿದರೆ ಐಟಿ ಕಂಪನಿಗಳಲ್ಲಿ ಕೆಲಸ ಸಿಗುವುದಿಲ್ಲ ಎಂದು ಕನ್ನಡದ ಯುವತಿಯೊಬ್ಬರು ವಿಡಿಯೋ ಮಾಡಿದ್ದರು. ಆಕೆಯ ಆರೋಪಕ್ಕೆ ಕನ್ನಡ ಪರ ಸಂಘಟನೆಗಳು ಪ್ರತಿಕ್ರಿಯೆ ನೀಡಿ, ಕನ್ನಡ ನೆಲದಲ್ಲಿ ಕನ್ನಡಿಗರೇ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಟೀಕಿಸಿದ್ದರು.

ಇದನ್ನೂ ಓದಿ: ರೈತರು ಹಾಗೂ ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಕುರಿತುಚರ್ಚೆ: ಪ್ರಧಾನಿ ಮೋದಿ ಭೇಟಿಗೆ ಸಮಯ ಕೋರಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರಿನಲ್ಲಿ ನೆಲೆ ನಿಂತಿರುವ ಐಟಿ ಕಂಪನಿಗಳು ಉದ್ಯೋಗನೀಡುವ ಸಂದರ್ಭದಲ್ಲಿ ತೆಲುಗು ಮತ್ತು ತಮಿಳಿಗರಿಗೆ ಹೆಚ್ಚಿನ ಮಾನ್ಯತೆಯನ್ನು ನೀಡುತ್ತಿದೆ. ರೆಸ್ಯೂಮ್​ ನಲ್ಲಿ ಕನ್ನಡ ಮಾತೃಭಾಷೆ ಎಂದು ಉಲ್ಲೇಖಿಸಿದರೆ ಉದ್ಯೋಗ ಸಿಗುತ್ತಿಲ್ಲ ಎಂದು ಯುವತಿ ವಿಡಿಯೋ ಮಾಡುವ ಮೂಲಕ ಅಳಲು ತೋಡಿಕೊಂಡಿದ್ದರು. ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್​​ ಇಂಟರ್​ವ್ಯೂವ್​​ ಗಳನ್ನು​ ಮಾಡುತ್ತಿಲ್ಲ. ಕಡಿಮೆ ಸಂಬಳಕ್ಕೆ ಬೇರೆ ಕಡೆಯಿಂದ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿದ್ದಾರೆ. ಇದರಿಂದ ಕನ್ನಡಿಗರಿಗೆ ಅವಕಾಶಗಳು ಸಿಗುತ್ತಿಲ್ಲ. ಇದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಿಹಾರ ನೀಡಬೇಕು ಎಂದು ಕೂಡ ಆ ಯುವತಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ