ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK
ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. […]
ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.
ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ.. ಅನರ್ಹರು ಮಾತ್ರ ಗೆಲ್ಲಬಾರದು: ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತಿದೆ. ಆದ್ರೆ ಒಟ್ಟಾಗಿ ಹೋದ್ರೆ ಏನಾಗುತ್ತೆ ಅಂತಾ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್ ನಾಯಕರು JDS ಅಭ್ಯರ್ಥಿಗಳ ಸೋಲಿಗೆ ಕೆಲಸ ಮಾಡುತ್ತಾರೆ. ಅದೇ ರೀತಿ ಉಪಚುನಾವಣೆಯಲ್ಲೂ ಮಾಡಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
ಆದ್ರೆ ನಮಗೆ JDS ಗೆಲ್ಲದಿದ್ದರೂ ಪರವಾಗಿಲ್ಲ; ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ! ಅನರ್ಹರು ಮಾತ್ರ ಗೆಲ್ಲಬಾರದು ಎಂದು ತೀರ್ಮಾನಿಸಿದ್ದೇವೆ. ಆ ನಿಟ್ಟಿನಲ್ಲಿ ಅನರ್ಹರ ವಿರುದ್ಧ ಹೋರಾಟ ಮಾಡುತ್ತೇವೆ. JDS ಪ್ರಬಲವಿಲ್ಲದ ಕಡೆ ಪರೋಕ್ಷವಾಗಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
Published On - 6:29 pm, Tue, 19 November 19