ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ. ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. […]

ಅನರ್ಹರು ಗೆದ್ರೆ ಅದು ಪ್ರಜಾಪ್ರಭುತ್ವದ ಅಣಕ, ಬೇಕಾದ್ರೆ ಕಾಂಗ್ರೆಸ್ ಗೆಲ್ಲಲಿ: HDK
ಸಾಧು ಶ್ರೀನಾಥ್​

Updated on: Nov 19, 2019 | 6:40 PM

ಬೆಂಗಳೂರು: ಯಾವ ಅನರ್ಹ ಶಾಸಕರಿಂದಾಗಿ ತಾವು ಅಧಿಕಾರದಿಂದ ಕೆಳಗಿಳಿಯಬೇಕಿತ್ತೋ ಆ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮತದಾರರಿಗೆ ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ಉಪಚುನಾವಣೆ ಕದನದ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅನರ್ಹರು ಚುನಾವಣೆಯಲ್ಲಿ ಗೆದ್ದರೆ ಅದು ಪ್ರಜಾಪ್ರಭುತ್ವದ ಅಣಕವೇ ಸರಿ! ಅನರ್ಹರನ್ನು ಸೋಲಿಸಿ ನಮ್ಮ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದೇವೆ. ಈ ಉಪಚುನಾವಣೆಯಲ್ಲಿ ಜೆಡಿಎಸ್​ ಹೆಚ್ಚು ಸ್ಥಾನ ಗಳಿಸಲಿದೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಹೆಚ್ಚಾಗಿರಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ.. ಅನರ್ಹರು ಮಾತ್ರ ಗೆಲ್ಲಬಾರದು:
ಕಾಂಗ್ರೆಸ್ ಮತ್ತು ಜೆಡಿಎಸ್​ ಒಟ್ಟಾಗಿ ಚುನಾವಣೆ ಎದುರಿಸಬೇಕು ಎಂಬ ಮಾತಿದೆ. ಆದ್ರೆ ಒಟ್ಟಾಗಿ ಹೋದ್ರೆ ಏನಾಗುತ್ತೆ ಅಂತಾ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಗೊತ್ತಾಗಿದೆ. ಕಾಂಗ್ರೆಸ್​ ನಾಯಕರು JDS​ ಅಭ್ಯರ್ಥಿಗಳ ಸೋಲಿಗೆ ಕೆಲಸ ಮಾಡುತ್ತಾರೆ. ಅದೇ ರೀತಿ ಉಪಚುನಾವಣೆಯಲ್ಲೂ ಮಾಡಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಆದ್ರೆ ನಮಗೆ JDS ಗೆಲ್ಲದಿದ್ದರೂ ಪರವಾಗಿಲ್ಲ; ಕಾಂಗ್ರೆಸ್ ಬೇಕಾದ್ರೆ ಗೆಲ್ಲಲಿ! ಅನರ್ಹರು ಮಾತ್ರ ಗೆಲ್ಲಬಾರದು ಎಂದು ತೀರ್ಮಾನಿಸಿದ್ದೇವೆ. ಆ ನಿಟ್ಟಿನಲ್ಲಿ ಅನರ್ಹರ ವಿರುದ್ಧ ಹೋರಾಟ ಮಾಡುತ್ತೇವೆ. JDS ಪ್ರಬಲವಿಲ್ಲದ ಕಡೆ ಪರೋಕ್ಷವಾಗಿ ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇವೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

Published On - 6:29 pm, Tue, 19 November 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us