Karnataka Bus Strike: ಸರ್ಕಾರಿ ಬಸ್​ ಬದಲು ಖಾಸಗಿ ಬಸ್​ ಓಡಿಸಲಾಗುತ್ತೆ, ಹೆಚ್ಚಿನ ದರ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ: ನರೇಂದ್ರ ಹೋಳ್ಕರ್

| Updated By: shruti hegde

Updated on: Apr 06, 2021 | 12:00 PM

KSRTC BMTC Workers Strike: ಸರ್ಕಾರಿ ಬಸ್​ಗಳು ಎಲ್ಲೆಲ್ಲಿ ಓಡಾಡುತ್ತವೋ ಅಲ್ಲೆಲ್ಲಾ ಖಾಸಗಿ ಬಸ್​ಗಳನ್ನು ಓಡಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದುವೇಳೆ, ಹೆಚ್ಚಿನ ದರ ವಸೂಲಿ ಕುರಿತಂತೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Karnataka Bus Strike: ಸರ್ಕಾರಿ ಬಸ್​ ಬದಲು ಖಾಸಗಿ ಬಸ್​ ಓಡಿಸಲಾಗುತ್ತೆ, ಹೆಚ್ಚಿನ ದರ ವಸೂಲಿ ಮಾಡಿದ್ರೆ ಕ್ರಮ ಕೈಗೊಳ್ಳಲಾಗುತ್ತೆ: ನರೇಂದ್ರ ಹೋಳ್ಕರ್
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಬಸ್​ಗಳ ಸೇವೆಯಲ್ಲಿ ವ್ಯತ್ಯಯ ಆಗುವ ಸಂಭವ ಅಧಿಕವಾಗಿದ್ದು, ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಸಾರಿಗೆ ಇಲಾಖೆ ಅಪರ ಆಯುಕ್ತ ನರೇಂದ್ರ ಹೋಳ್ಕರ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಖಾಸಗಿ ಬಸ್ ಓಡಾಟಕ್ಕೆ ವ್ಯವಸ್ಥೆ ಮಾಡುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಸಹಜವಾಗಿ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತದೆ. ಇದಕ್ಕಾಗಿ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಯಾಣಿಕರಿಗಾಗಿ ಖಾಸಗಿ ವಾಹನ ವ್ಯವಸ್ಥೆ ಮಾಡಲಾಗಿದ್ದು, ತಾತ್ಕಾಲಿಕ ಪರ್ಮಿಟ್ ನೀಡುವುದಕ್ಕೆ ಕ್ರಮಕೈಗೊಳ್ಳಲಾಗಿದೆ. ಇದರೊಂದಿಗೆ, ಖಾಸಗಿ ಬಸ್ ಓಡಿಸಿದ್ರೂ ದರ ಹೆಚ್ಚಳ ಮಾಡುವಂತಿಲ್ಲ. ಪ್ರಯಾಣಿಕರಿಂದ ಹೆಚ್ಚಿನ ದರ ಪಡೆಯದಂತೆ ಸೂಚಿಸಲಾಗಿದೆ.

ಖಾಸಗಿಯವರು ಹೆಚ್ಚಿನ ದರ ವಸೂಲಿ ಮಾಡುವಂತಿಲ್ಲ
ಅಂತೆಯೇ, ಮಿನಿಬಸ್, ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್​ಗಳ ಓಡಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾತ್ಕಾಲಿಕ ಪರ್ಮಿಟ್ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಹಲವು ಬಸ್ ಮಾಲೀಕರು ಪರ್ಮಿಟ್ ಪಡೆದು ಬಸ್ ಓಡಿಸಲು ಅನುಮತಿ ಸೂಚಿಸಿದ್ದಾರೆ. ಸರ್ಕಾರಿ ಬಸ್​ಗಳು ಎಲ್ಲೆಲ್ಲಿ ಓಡಾಡುತ್ತವೋ ಅಲ್ಲೆಲ್ಲಾ ಖಾಸಗಿ ಬಸ್​ಗಳನ್ನು ಓಡಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದುವೇಳೆ, ಹೆಚ್ಚಿನ ದರ ವಸೂಲಿ ಕುರಿತಂತೆ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ:
ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ 

Bus Strike: ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ಅನುಮಾನ; ನಾಳೆಯಿಂದ ಕರ್ನಾಟಕ ರಾಜ್ಯಾದ್ಯಂತ ಬಸ್​ ಬಂದ್?

(If KSRTC BMTC employees go for strike then Private bus will start serving publics says Narendra Holkar)