AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ದಿಮೆಗಳು (ಐಟಿ ಇಂಡಸ್ಟ್ರಿ) ಬೆಂಗಳೂರಿಗೆ ಬಾರದಿದ್ದರೆ ಬೆಂಗಳೂರಿನಲ್ಲಿ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ (Bengaluru Traffic) ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಹೇಳಿದ್ದಾರೆ. ಬೆಂಗಳೂರಿಗೆ ಐಟಿ ಬರದಿದ್ದರೆ ಸಂಚಾರ ದಟ್ಟಣೆ ಇರುತ್ತಿರಲಿಲ್ಲ. ಆದರೆ ನಮ್ಮ ಮಕ್ಕಳು ನಮ್ಮ ಜೊತೆಯೇ ಇದ್ದಾರೆ. ಮೊದಲೆಲ್ಲಾ ಕೆಲಸ ಹುಡುಕಿಕೊಂಡು ಬೇರೆ ಕಡೆ (ಇತರೆ ರಾಜ್ಯ, ವಿದೇಶಗಳಿಗೆ) ಹೋಗಬೇಕಿತ್ತು. ಈಗ ನಮ್ಮ ಮಕ್ಕಳಿಗೆ ಬೆಂಗಳೂರಿನಲ್ಲೇ ಉದ್ಯೋಗ ಸಿಗುತ್ತಿದೆ. ಇಲ್ಲೇ ಇದ್ದು ಕನ್ನಡದ ಹುಡುಗಿಯರನ್ನೇ ಮದುವೆಯಾಗುತ್ತಿದ್ದಾರೆ […]

ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ
ಐಟಿ ಇಂಡಸ್ಟ್ರಿ ಬೆಂಗಳೂರಿಗೆ ಬಾರದಿದ್ದರೆ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಹೇಳಿಕೆ
TV9 Web
| Updated By: ಸಾಧು ಶ್ರೀನಾಥ್​|

Updated on:Jun 27, 2022 | 2:49 PM

Share

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ದಿಮೆಗಳು (ಐಟಿ ಇಂಡಸ್ಟ್ರಿ) ಬೆಂಗಳೂರಿಗೆ ಬಾರದಿದ್ದರೆ ಬೆಂಗಳೂರಿನಲ್ಲಿ ಇಷ್ಟೊಂದು ಟ್ರಾಫಿಕ್ ಜಾಮ್ ಇರುತ್ತಿರಲಿಲ್ಲ (Bengaluru Traffic) ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಹೇಳಿದ್ದಾರೆ. ಬೆಂಗಳೂರಿಗೆ ಐಟಿ ಬರದಿದ್ದರೆ ಸಂಚಾರ ದಟ್ಟಣೆ ಇರುತ್ತಿರಲಿಲ್ಲ. ಆದರೆ ನಮ್ಮ ಮಕ್ಕಳು ನಮ್ಮ ಜೊತೆಯೇ ಇದ್ದಾರೆ. ಮೊದಲೆಲ್ಲಾ ಕೆಲಸ ಹುಡುಕಿಕೊಂಡು ಬೇರೆ ಕಡೆ (ಇತರೆ ರಾಜ್ಯ, ವಿದೇಶಗಳಿಗೆ) ಹೋಗಬೇಕಿತ್ತು. ಈಗ ನಮ್ಮ ಮಕ್ಕಳಿಗೆ ಬೆಂಗಳೂರಿನಲ್ಲೇ ಉದ್ಯೋಗ ಸಿಗುತ್ತಿದೆ. ಇಲ್ಲೇ ಇದ್ದು ಕನ್ನಡದ ಹುಡುಗಿಯರನ್ನೇ ಮದುವೆಯಾಗುತ್ತಿದ್ದಾರೆ ಎಂದು ಸುಧಾ ಮೂರ್ತಿ ಅವರು ಐಟಿ ಇಂಡಸ್ಟ್ರಿ ಮತ್ತು ಬೆಂಗಳೂರು ಟ್ರಾಫಿಕ್ ಜಾಮ್ ಬಗ್ಗೆ ವ್ಯಾಖ್ಯಾನಿಸಿದ್ದಾರೆ.

ಐಟಿ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕೊಡುಗೆ ಅಪಾರ. ಹುಬ್ಬಳ್ಳಿಯಲ್ಲಿ ಕೂಡ ಬೆಂಗಳೂರಿನ ರೀತಿ ಅಭಿವೃದ್ಧಿ ಆಗಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಅವರಲ್ಲಿ ಮನವಿ ಮಾಡ್ತೇನೆ ಎಂದು ಬೆಂಗಳೂರಿನಲ್ಲಿ ಸುಧಾ ಮೂರ್ತಿ ಹೇಳಿದರು.

ನಗರದಲ್ಲಿ ಹೆಚ್ಚಾದ ಟ್ರಾಫಿಕ್ ಸಮಸ್ಯೆ: ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಟ್ವೀಟ್ ಮೂಲಕ ಸಂಚಾರ ಪೊಲೀಸರಿಗೆ ಡಿಜಿ & ಐಜಿಪಿ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಟ್ರಾಫಿಕ್ ಸಮಸ್ಯೆ ನಿರ್ವಹಣೆ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದು ಮತ್ತೊಂದೆಡೆ ಟ್ವೀಟ್ ಮೂಲಕ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಡಿಜಿ&ಐಜಿಪಿ ಪ್ರವೀಣ್ ಸೂದ್  ಸೂಚನೆ ನೀಡಿದ್ದಾರೆ.

ಸಂಚಾರ ದಟ್ಟಣೆ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆಗೆ ಡಾ.ರಜನೀಶ್ ಗೋಯಲ್ ಮಹತ್ವದ ಸಭೆ ನಡೆಸಿದ್ದಾರೆ. ಸರ್ಕಾರದ ಹೆಚ್ಚುವರಿ‌ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಗರ ಪೋಲಿಸ್ ಆಯುಕ್ತ ಪ್ರತಾಪ್ ರೆಡ್ಡಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಜಯರಾಂ, ಬಿಎಂಆರ್ ಸಿಎಲ್ ನ ಎಂಡಿ ಅಂಜುಂ ಪರ್ವೇಜ್, ಬಿಡಿಎ ಆಯುಕ್ತ ರಾಜೇಶ್ ಗೌಡ, ಸಂಚಾರಿ ಪೋಲಿಸ್ ಜಂಟಿ ಆಯುಕ್ತ ರವಿಕಾಂತೆ ಗೌಡ, ಸ್ಮಾರ್ಟ್ ಸಿಟಿ ಎಂಡಿ ರಾಜೇಂದ್ರ ಚೋಳನ್, ಬಿಎಂಟಿಸಿ ನಿರ್ದೇಶಕ ಸೂರ್ಯ ಸೇನ್ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಇನ್ನು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಟ್ರಾಫಿಕ್ ಪೊಲೀಸರು ಬೇಕಾಬಿಟ್ಟಿ ವಾಹನಗಳನ್ನು ತಡೆಯುವಂತಿಲ್ಲ. ಸುಖಾಸುಮ್ಮನೆ ವಾಹನಗಳನ್ನ ತಡೆದು ಪರಿಶೀಲಿಸದಂತೆ ಸೂಚನೆ ನೀಡಿದ್ದಾರೆ. ಡ್ರಂಕ್ & ಡ್ರೈವ್ ಮಾಡುವವರನ್ನು ಮಾತ್ರ ತಪಾಸಣೆ ಮಾಡಬೇಕು. ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ವಹಿಸಬೇಕು. ಆದ್ರೆ ಸುಖಾಸುಮ್ಮನೆ ವಾಹನ ತಡೆದು ಪರಿಶೀಲನೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದಿದೆ. ಹೀಗಾಗಿ ವಾಹನಗಳನ್ನು ತಡೆಯದಂತೆ ಸಂಚಾರಿ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

Also Read:

IPS transfer: ಐಪಿಎಸ್ ಅಧಿಕಾರಿಗಳ ಭಾರೀ ವರ್ಗಾವಣೆ, ಸಂಜೀವ್ ಪಾಟೀಲ್ ಬೆಳಗಾವಿ ಎಸ್​ಪಿ, ಹಾಸನ ಎಸ್​ಪಿ ಎತ್ತಂಗಡಿ

 

Published On - 2:31 pm, Mon, 27 June 22

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್