ಕೊವಿಡ್ ಲಕ್ಷಣವಿದ್ದರೂ ನೆಗೆಟಿವ್ ಬರುತ್ತಿದ್ದರೆ ಸೂಕ್ತ ಚಿಕಿತ್ಸೆಗೆ ಕ್ರಮ; ಆರೋಗ್ಯ ಸಚಿವ ಡಾ ಸುಧಾಕರ್

ರಾಜ್ಯದಲ್ಲಿ ಈ ಮೂರು ಹಂತಗಳಲ್ಲಿ ಈವರೆಗೆ ಕೇಂದ್ರದಿಂದ 99.40 ಲಕ್ಷ ಲಸಿಕೆಯ ಡೋಸ್ ಗಳು ಲಭ್ಯವಾಗಿದ್ದು, 93.5 ಲಕ್ಷ ಡೋಸ್ ಲಸಿಕೆ ಹಾಕಲಾಗಿದೆ. ಇನ್ನೂ ಅಂದಾಜು 5.9 ಲಕ್ಷ ಡೋಸ್ ಗಳು ಲಭ್ಯವಿದೆ; ಸಿಎಂ ಯಡಿಯೂರಪ್ಪ

ಕೊವಿಡ್ ಲಕ್ಷಣವಿದ್ದರೂ ನೆಗೆಟಿವ್ ಬರುತ್ತಿದ್ದರೆ ಸೂಕ್ತ ಚಿಕಿತ್ಸೆಗೆ ಕ್ರಮ; ಆರೋಗ್ಯ ಸಚಿವ ಡಾ ಸುಧಾಕರ್
ಡಾ.ಕೆ.ಸುಧಾಕರ್​
Follow us
guruganesh bhat
|

Updated on:Apr 29, 2021 | 10:50 PM

ಬೆಂಗಳೂರು: ಇತ್ತೀಚೆಗೆ ಕೊವಿಡ್ ಲಕ್ಷಣಗಳಿದ್ದರೂ ಆರ್​ಟಿಪಿಸಿಆರ್, ರ‍್ಯಾಪಿಡ್ ಆ್ಯಂಟಿಜೆನ್​ ಟೆಸ್ಟ್​ನಲ್ಲಿ ನೆಗೆಟಿವ್​​ ಕಂಡುಬರುತ್ತಿದೆ. ಇಂತಹ ಪ್ರಕರಣಗಳಲ್ಲಿ ಸಿಂಡ್ರೋಮಿಕ್​ ವಿಧಾನ ಅನುಸರಿಸಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೆ ನೆರವಾಗಲು ವೈದ್ಯರ ಸಲಹೆ ಮೇರೆಗೆ ರೋಗಿ ಸಂಖ್ಯೆ ನೀಡಲು ನಿರ್ಧರಿಸಲಾಗಿದೆ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಸುಧಾಕರ್​ ಮಾಹಿತಿ ನೀಡಿದರು.

ಇತ್ತೀಚೆಗೆ ಆರ್ ಟಿ-ಪಿಸಿಆರ್ & ರ‍್ಯಾಪಿಡ್ ಆಂಟಿಜೆನ್ ಎರಡೂ ರೀತಿಯ ಪರೀಕ್ಷೆಗಳಲ್ಲಿ ಕೋವಿಡ್ ಲಕ್ಷಣಗಳಿದ್ದರೂ ನೆಗೆಟಿವ್ ವರದಿ ಕಂಡು ಬರುತ್ತಿರುವುದರಿಂದ ಅಂತಹ ಪ್ರಕರಣಗಳಲ್ಲಿ ಸಿಂಡ್ರೋಮಿಕ್ ವಿಧಾನ ಅನುಸರಿಸಿ ಸೋಂಕಿತರ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆಗೆ ನೆರವಾಗಲು ವೈದ್ಯರ ಸಲಹೆ ಮೇರೆಗೆ ಪೇಶಂಟ್ ನಂಬರ್ ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

18ರಿಂದ 45 ವರ್ಷದೊಳಗಿನವರಿಗೆ ಹಂತಹಂತವಾಗಿ ಲಸಿಕೆ ನೀಡಲಾಗುವುದು. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ 1 ಕೋಟಿ ಡೋಸ್ ಲಸಿಕೆಯನ್ನು ಖರೀದಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದರು.

ಹೆಚ್ಚುವರಿಯಾಗಿ 1 ಕೋಟಿ ಲಸಿಕೆ ಖರೀದಿಗೆ ಕಾರ್ಯಾದೇಶ ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಒದಗಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ವ್ಯಾಕ್ಸಿನ್​ ನೀಡಲಾಗಿದ್ದು, 2ನೇ ಹಂತದಲ್ಲಿ ಕೊರೊನಾ ವಾರಿಯರ್ಸ್​ಗೆ ಕೊವಿಡ್ ಲಸಿಕೆ ಒದಗಿಸಲಾಗಿದೆ. 3ನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಈವರೆಗೆ 3 ಹಂತಗಳಲ್ಲಿ ಲಸಿಕೆ ಅಭಿಯಾನ ಯಶಸ್ವಿಯಾಗಿದೆ. ಒಟ್ಟಾರೆ ಕೊರೊನಾ ವಿರುದ್ಧ ಹೋರಾಟದಲ್ಲಿ ಯಶಸ್ವಿಯಾಗುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈ ಮೂರು ಹಂತಗಳಲ್ಲಿ ಈವರೆಗೆ ಕೇಂದ್ರದಿಂದ 99.40 ಲಕ್ಷ ಲಸಿಕೆಯ ಡೋಸ್ ಗಳು ಲಭ್ಯವಾಗಿದ್ದು, 93.5 ಲಕ್ಷ ಡೋಸ್ ಲಸಿಕೆ ಹಾಕಲಾಗಿದೆ. ಇನ್ನೂ ಅಂದಾಜು 5.9 ಲಕ್ಷ ಡೋಸ್ ಗಳು ಲಭ್ಯವಿದೆ. ಲಸಿಕೆ ಅಭಿಯಾನ ಯಾವುದೇ ಅಡೆತಡೆಗಳಿಲ್ಲದೆ ನಿರಂತರವಾಗಿ ನಡೆಯುತ್ತಿದೆ. ನಾಲ್ಕನೇ ಹಂತದಲ್ಲಿ ದೇಶದ ಜನಸಂಖ್ಯೆಯ ಅತಿದೊಡ್ಡ ಸಮೂಹದ ಲಸಿಕೆ ಕಾರ್ಯಕ್ರಮದ ಸಮಯ ಸನ್ನಿಹಿತವಾಗಿದೆ. ಕೇಂದ್ರ ಸರ್ಕಾರವು ಹಲವು ರಾಜ್ಯಗಳ ಮನವಿಯಂತೆ ಲಸಿಕೆ ಖರೀದಿ ಹಾಗೂ ಅನುಷ್ಠಾನವನ್ನು ರಾಜ್ಯಗಳ ವಿವೇಚನೆಗೆ ಮುಕ್ತಗೊಳಿಸಿದೆ. ರಾಜ್ಯ ಸರ್ಕಾರವು 1 ಕೋಟಿ ಡೋಸ್ ಗಳಷ್ಟು ಲಸಿಕೆ ಖರೀದಿಗೆ ಮುಂದಾಗಿದೆ. ಹೆಚ್ಚುವರಿಯಾಗಿ ಮತ್ತೂ ಒಂದು ಕೋಟಿ ಲಸಿಕೆ ಖರೀದಿಗೆ ಕಾರ್ಯಾದೇಶ ನೀಡಲಾಗುತ್ತಿದೆ. ನಾಲ್ಕನೇ ಹಂತದ ಲಸಿಕಾ ಅಭಿಯಾನವನ್ನು ಹಂತ ಹಂತವಾಗಿ ನಡೆಸಲಾಗುವುದು. ಔಷಧ ಕಂಪೆನಿಗಳು ಹೆಚ್ಚಿರುವ ಈ ಬೇಡಿಕೆಗೆ ತಕ್ಕಂತೆ ತಮ್ಮ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿವೆ. ಮೂರನೇ ಲಸಿಕೆಯೂ ಶೀಘ್ರವೇ ಲಭ್ಯವಾಗಲಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಲಭ್ಯತೆಯ ಆಧಾರದಲ್ಲಿ ಲಸಿಕಾ ಅಭಿಯಾನ ಮುಂದುವರೆಯಲಿದೆ. ಈ ಅಭಿಯಾನವು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಹಾಗೂ ಸುಗಮವಾಗಿ ನಡೆಯುವುದನ್ನು ಖಾತರಿ ಪಡಿಸುವ ಗುರಿಯೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು. ಆ ಮೂಲಕ ಕೋವಿಡ್ ವಿರುದ್ಧದ ಸಮರದಲ್ಲಿ ಮೇಲುಗೈ ಸಾಧಿಸುವ ವಿಶ್ವಾಸವಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

Covid-19 Karnataka Update: ಕರ್ನಾಟಕದಲ್ಲಿ ಇಂದು 35,024 ಮಂದಿಗೆ ಕೊರೊನಾ ಸೋಂಕು, 270 ಸಾವು

9If one who have covid symptoms but report is negative will take treatment says health minister Dr K Sudhakar)

Published On - 10:50 pm, Thu, 29 April 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ