ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿ, ಸಿದ್ದರಾಮಯ್ಯಗೇ ಚಿನ್ನದ ಪದಕ: ಬಿಜೆಪಿ ವ್ಯಂಗ್ಯ
ಮುಡಾ ಸೇರಿದಂತೆ ವಿವಿಧ ಭ್ರಷ್ಟಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಪ್ರತಿಪಕ್ಷ ಬಿಜೆಪಿ, ಸಾಮಾಜಿಕ ಮಾಧ್ಯಮಗಳಲ್ಲಿಯೂ ವಾಗ್ದಾಳಿ ಮುಂದುವರಿಸಿದೆ. ಇದೀಗ ಎಕ್ಸ್ನಲ್ಲಿ ಎರಡು ವಿಭಿನ್ನ ಸಂದೇಶಗಳನ್ನು ಪ್ರಕಟಿಸಿ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯವಾಡಿದೆ.
ಬೆಂಗಳೂರು, ಜುಲೈ 30: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರಿಸಿದೆ. ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿಯೂ ಟೀಕಾ ಪ್ರಹಾರ ತೀವ್ರಗೊಳಿಸಿದೆ. ಒಲಂಪಿಕ್ಸ್ ಜತೆ ಹೋಲಿಸಿ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ವ್ಯಂಗ್ಯವಾಡಿದೆ.
ಬಿಜೆಪಿ ಎಕ್ಸ್ ಸಂದೇಶ
ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ.#ScamRaj #ScamSultan #CongressFailsKarnataka #CongressLootsKarnataka pic.twitter.com/XJbTk07gmR
— BJP Karnataka (@BJP4Karnataka) July 30, 2024
ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ ಭ್ರಷ್ಟಾಚಾರದ ಪಿತಾಮಹನಿಗೆ ಚಿನ್ನದ ಪದಕ ಖಚಿತ-ನಿಶ್ಚಿತ-ಖಂಡಿತ ಎಂದು ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಫೋಟೊವನ್ನು ಬಿಜೆಪಿ ಪೋಸ್ಟ್ ಮಾಡಿದೆ. ಇದರಲ್ಲಿ ಸಿದ್ದರಾಮಯ್ಯ ಚಿನ್ನದ ಪದಕ, ನಾಗೇಂದ್ರ ಬೆಳ್ಳಿ ಹಾಗೂ ದದ್ದಲ್ ಕಂಚಿನ ಪದಕ ಧರಿಸಿರುವ ಎಡಿಟೆಡ್ ಫೊಟೊ ಪ್ರಕಡಿಸಲಾಗಿದೆ.
ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಆ ಬಗ್ಗೆಯೂ ಕುಹಕವಾಡಿರುವ ಬಿಜೆಪಿವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದೆ.
ಕಪ್ಪ ಕೊಡಲು ಹೋದ ಸಿಎಂ-ಡಿಸಿಎಂ!
ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವದಕ್ಕಿಂತಲೂ, ಹೈಕಮಾಂಡ್ ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಮಗ್ನವಾಗಿರುವ ಸಿಎಂ-ಡಿಸಿಎಂ!!!#CongressLootsKarnataka pic.twitter.com/oaBgc7UEfZ
— BJP Karnataka (@BJP4Karnataka) July 30, 2024
ನೆರೆಯಿಂದ ಹಾನಿಗೊಳಗಾದ ಕನ್ನಡಿಗರ ಕಂಬನಿ ಒರೆಸುವುದಕ್ಕಿಂತಲೂ, ಹೈಕಮಾಂಡ್ಗೆ ಕಪ್ಪ ತಲುಪಿಸುವ ಕಾರ್ಯದಲ್ಲಿ ಮಗ್ನವಾಗಿರುವ ಸಿಎಂ-ಡಿಸಿಎಂ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಇಳಿಸಲು ಡಿಕೆ ಶಿವಕುಮಾರ್ ಮಾತಿನಂತೆ ಬಿವೈ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೊಸ ಬಾಂಬ್
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಆ ಕುರಿತು ಹೈಕಮಾಂಡ್ ಜತೆ ಚರ್ಚಿಸಲು ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಮತ್ತೊಂದು ಮೂಲಗಳ ಪ್ರಕಾರ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳ ಆರೋಪ ಹೆಚ್ಚಾಗುತ್ತಿದ್ದಂತೆಯೇ ಆ ಬಗ್ಗೆ ಚರ್ಚಿಸಲು ಸಿಎಂ ಹಾಗೂ ಡಿಸಿಎಂರನ್ನು ಹೈಕಮಾಂಡ್ ಕರೆಸಿಕೊಂಡಿದೆ ಎನ್ನಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ