ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್: ಸಿಬಿಐ ನಡೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇನೆ ಎಂದ ಯತ್ನಾಳ್

| Updated By: Rakesh Nayak Manchi

Updated on: Nov 29, 2023 | 4:24 PM

ತನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಬಿಜೆಪಿ ಸರ್ಕಾರದ ಆದೇಶಕ್ಕೆ ತಡೆಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. ಮುಂದೆ ಸಿಬಿಐ ನಡೆಯ ಮೇಲೆ ಡಿಕೆ ಶಿವಕುಮಾರ್ ಅವರ ಭವಿಷ್ಯ ನಿಂತಿದೆ. ಈ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಟ್ವೀಟ್ ಮಾಡಿದ್ದು, ಸಿಬಿಐ ನಡೆಗಾಗಿ ಕಾಯುತ್ತಿದ್ದೇನೆ ಎಂದಿದ್ದಾರೆ.

ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್: ಸಿಬಿಐ ನಡೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇನೆ ಎಂದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಡಿಕೆ ಶಿವಕುಮಾರ್
Follow us on

ಬೆಂಗಳೂರು, ನ.29: ತನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಬಿಜೆಪಿ ಸರ್ಕಾರದ ಆದೇಶಕ್ಕೆ ತಡೆಕೋರಿ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ. ಆ ಮೂಲಕ ಕೋರ್ಟ್ ಡಿಕೆ ಶಿವಕುಮಾರ್​ಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಸಿಬಿಐ ಮುಂದಿನ ನಡೆಯ ಮೇಲೆ ನನ್ನ ನಿರ್ಧಾರ ನಿಂತಿದೆ ಎಂದಿದ್ದಾರೆ.

ಗೌರವಾನ್ವಿತ ಹೈಕೋರ್ಟ್ ರಿಟ್ ಮೇಲ್ಮನವಿ ಮತ್ತು ರಿಟ್ ಅರ್ಜಿಯನ್ನು ಹಿಂಪಡೆಯಲು ಮೇಲ್ಮನವಿದಾರರಿಗೆ ಅನುಮತಿ ನೀಡಿದೆ. ಅನುಮತಿ ಹಿಂಪಡೆಯುವ ಸವಾಲನ್ನು ಪೀಠ ವಿಚಾರಣೆ ನಡೆಸಲಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅನುಮತಿ ವಾಪಸ್ ಪಡೆಯುವ ಸರ್ಕಾರದ ನಿರ್ಧಾರವನ್ನು ಸಿಬಿಐ ಪ್ರಶ್ನಿಸಬೇಕು, ಇಲ್ಲದಿದ್ದರೆ ನನ್ನ ಕಾನೂನು ತಂಡವನ್ನು ಸಂಪರ್ಕಿಸಿ ಮುಂದಿನ ನಡೆಯನ್ನು ನಿರ್ಧರಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್, ಮೇಲ್ಮನವಿ ವಾಪಸ್​ಗೆ ಅನುಮತಿ

ತಪ್ಪೇ ಮಾಡದೆ ಇದ್ದರೇ ತನಿಖೆ ಎದುರಿಸಲು “ಭಯ”ವೇಕೆ?

ತನ್ನ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಯತ್ನಾಳ್​ಗೆ ಯಾರ್ಯಾರಿಗೆ ಯಾವ ಯಾವ ರೀತಿ ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಯತ್ನಾಳ್, ಯಾರು, ಯಾರಿಗೆ ಉತ್ತರ ಕೊಡುತ್ತಾರೋ ಕಾಲ ನಿರ್ಣಯ ಮಾಡುತ್ತದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಯತ್ನಾಳ್, ಯಾರು, ಯಾರಿಗೆ ಉತ್ತರ ಕೊಡುತ್ತಾರೋ ಕಾಲ ನಿರ್ಣಯ ಮಾಡುತ್ತದೆ. ನ್ಯಾಯಾಲಯದಲ್ಲಿ ಹಾಕಿದ್ದ ಅರ್ಜಿ ವಾಪಸ್ ಪಡೆಯುವುದು ಒಂದು ವಿಜಯವೆಂದು ಸಂಭ್ರಮಿಸಿದರೆ ಅದನ್ನು ಯಾರು ಪ್ರಶ್ನೆ ಮಾಡುತ್ತಾರೆ? ತಪ್ಪೇ ಮಾಡದೆ ಇದ್ದರೇ ತನಿಖೆ ಎದುರಿಸಲು “ಭಯ”ವೇಕೆ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ