ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ: ಮಂಡ್ಯ ಸಂಸದೆ ಸುಮಲತಾ ಟ್ವೀಟ್

ಬೇರೆಯವರಿಗೆ ಗಂಧವನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಅದೇ ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ ಎಂದು ಟ್ವಿಟರ್​ನಲ್ಲಿ ಮಂಡ್ಯ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ.

ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ: ಮಂಡ್ಯ ಸಂಸದೆ ಸುಮಲತಾ ಟ್ವೀಟ್
ಸುಮಲತಾ ಅಂಬರೀಷ್​
Follow us
TV9 Web
| Updated By: preethi shettigar

Updated on:Jul 11, 2021 | 11:03 AM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ನಡುವೆ ಮಾತಿನ ಸಮರ ನಡೆಯುತ್ತಿರುವುದು ಗೊತ್ತಿರುವ ವಿಚಾರ. ಆದರೆ ಇದೀಗ ಮಾತಿನ ಸಮರ ನಡೆಸುತ್ತಿದ್ದ ಮಂಡ್ಯ ಸಂಸದೆ ಸುಮಲತಾ ಟ್ವೀಟ್ ಮೂಲಕ ಪ್ರತಿಕ್ರಿಯಿಸಲು ಆರಂಭಿಸಿದ್ದಾರೆ. ಅದರಂತೆ ಬೇರೆಯವರಿಗೆ ಗಂಧವನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಅದೇ ನಾವು ಬೇರೆಯವರಿಗೆ ಕೆಸರನ್ನು ಹಚ್ಚಲು ಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ ಎಂದು ಟ್ವಿಟರ್​ನಲ್ಲಿ ಮಂಡ್ಯ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಕೂಡ ಟ್ವೀಟ್​ ಮಾಡಿದ ಮಂಡ್ಯ ಸಂಸದೆ ಸುಮಲತಾ ಸತ್ಯದ ಪರ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಮಹಿಳೆಯರು ಅಧಿಕಾರದಲ್ಲಿದ್ದರೆ ಕೆಲವರು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಟ್ವಿಟ್ಟರ್​ನಲ್ಲಿ ನಿನ್ನೆ ( ಜುಲೈ 10) ಮಂಡ್ಯ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ.

ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ ಕುಮಾರಸ್ವಾಮಿ ಮತ್ತು ಸುಮಲತಾ ನಡುವಿನ ಜಟಾಪಟಿ ತಾರಕ್ಕೇರಿದ್ದು, ಅಭಿಮಾನಿಗಳ ನಡುವೆ ಜಗಳ ಆರಂಭವಾಗಿದೆ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಸುಮಲತಾ ಆಪ್ತ ರಾಕ್​ಲೈನ್​ ವೆಂಕಟೇಶ್ ನಿವಾಸಕ್ಕೆ ಇಂದು (ಜುಲೈ 10) ಬೆಳ್ಳಂಬೆಳಗ್ಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಸುಮಲತಾ ನಿವಾಸಕ್ಕೆ ಪೊಲೀಸರಿಂದ ಭದ್ರತೆ ಸುಮಲತಾ ಮನೆಗೂ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಯಿದ್ದು, ಬೆಂಗಳೂರಿನ ಜೆ.ಪಿ.ನಗರದ ಸುಮಲತಾ ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಜೆ.ಪಿ.ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ಸುತ್ತಮುತ್ತಲಿನ ಠಾಣೆಗಳ 30ಕ್ಕೂ ಹೆಚ್ಚು ಪೊಲೀಸರು ಭದ್ರತೆ ನೀಡಿದ್ದಾರೆ. ಸುಮಲತಾ ಮನೆಯ ಎರಡೂ ಕಡೆ ಬ್ಯಾರಿಕೇಡ್ನ ಅಳವಡಿಸಿದ್ದಾರೆ.

ಸುಮಲತಾ ‘ಸಮಾಧಿ’ ಹೇಳಿಕೆಗೆ ಹೆಚ್​ಡಿಕೆ ‘ಮಣ್ಣು’ ತಿರುಗೇಟು ಕುಮಾರಸ್ವಾಮಿ ಅಂಬರೀಶ್ ಹೆಸರನ್ನ ಪ್ರಸ್ತಾಪ ಮಾಡೋ ಮೂಲಕ ಸುಮಲತಾ ವಿರುದ್ಧ ಕಿಡಿ ಕಾರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಕಳೆದ ಬಾರಿ ಚುನಾವಣೆಯಲ್ಲಿ ಅಂಬರೀಶ್ ಹೆಸರು ಪ್ರಸ್ತಾಪಿಸಿ 1 ಪಾಠ ಕಲಿತಿದ್ದಾರೆ. ಮುಂದಿನ ಚುನಾವಣೆಯಲ್ಲಿ 7 ಪಾಠ ಕಲೀತಾರೆ. ನಿಮ್ಮ ಸಮಾಧಿಯನ್ನ ನೀವೇ ತೋಡಿಕೊಂಡರೆ ಯಾರೂ ಸಹಾಯ ಮಾಡೋಕೆ ಆಗಲ್ಲ ಎಂದು ತಿಳಿಸಿದರು. ಇದಕ್ಕೆ ತಿರುಗೇಟು ನೀಡಿದ ಕುಮಾರಸ್ವಾಮಿ, ನಾನಲ್ಲ ಮಣ್ಣಾಗೋದು ನೀವು ಎಂದು ಕೌಂಟರ್ ಅಟ್ಯಾಕ್ ಮಾಡಿದರು.

ಇದನ್ನೂ ಓದಿ: ಮುಗಿಯದ ಹೆಚ್​ಡಿಕೆ ಸುಮಲತಾ ಮಹಾಸಮರ; ಅಂಬಿ ಅಭಿಮಾನಿಗಳಿಂದ ಇಂದು ಸಭೆ

ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ, ಆದರೆ ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ: ಸಂಸದೆ ಸುಮಲತಾಗೆ ಕೈಮುಗಿದ ಮಾಜಿ ಸಿಎಂ ಕುಮಾರಸ್ವಾಮಿ

Published On - 10:43 am, Sun, 11 July 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ