AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರ ಬಗ್ಗೆ ಕಾಳಜಿ ಇದ್ರೆ ರಾಷ್ಟ್ರ ಮಟ್ಟದಲ್ಲಿ SCSP/TSPI ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲ್

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದಲಿತರ ಬಗ್ಗೆ ಕಾಳಜಿ ಇದ್ರೆ ರಾಷ್ಟ್ರ ಮಟ್ಟದಲ್ಲಿ SCSP/TSPI ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲ್
ದಲಿತರ ಬಗ್ಗೆ ಕಾಳಜಿ ಇದ್ರೆ ರಾಷ್ಟ್ರ ಮಟ್ಟದಲ್ಲಿ SCSP/TSPI ಕಾಯ್ದೆ ಜಾರಿಗೆ ತನ್ನಿ: ಮೋದಿಗೆ ಸಿಎಂ ಸವಾಲ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 27, 2024 | 8:51 PM

Share

ಬೆಂಗಳೂರು, ಸೆಪ್ಟೆಂಬರ್​ 27: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ.

ಇದನ್ನೂ ಓದಿ: ಉಚ್ಚಾಟಿತ ಈಶ್ವರಪ್ಪ ಮನೆಯಲ್ಲಿ ಭಿನ್ನಮತೀಯ ಶಾಸಕರ ಸಭೆಯನ್ನು ಪ್ರೇಮಸಲ್ಲಾಪ ಎನ್ನೋಣವೇ? ಮೋದಿಗೆ ಸಿಎಂ ತಿರುಗೇಟು

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ ರೂ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ರೂ. ಮಾತ್ರ. ಪ್ರಧಾನಿ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ತಿಳಿಸಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ ರೂ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ. ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಗೆಲ್ಲಿಸಿದ್ದು ಕರ್ನಾಟಕದ ಜನರೇ ಹೊರತು ಕೆಸಿ ವೇಣುಗೋಪಾಲ್ ಅಲ್ಲ: ಲೆಹರ್‌ ಸಿಂಗ್ ಕಿಡಿ

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ