AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದನ್ನು ಬೊಟ್ಟು ಮಾಡಿದರು.

71 ಯೂನಿಟ್​ಗೆ ಮೂರು ಪಟ್ಟು ದಂಡ ವಿಧಿಸಿದ ಬೆಸ್ಕಾಂ: ಹೆಚ್​ಡಿ ಕುಮಾರಸ್ವಾಮಿ ಆರೋಪ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: Rakesh Nayak Manchi|

Updated on: Nov 17, 2023 | 12:01 PM

Share

ಬೆಂಗಳೂರು, ನ.17: ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ (BESCOM) ವಿಧಿಸಿದ 68,526 ರೂಪಾಯಿ ದಂಡದ ಮೊತ್ತವನ್ನು ಪಾವತಿಸಿದ ನಂತರ ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy), 71 ಯೂನಿಟ್​ಗೆ ಬೆಸ್ಕಾಂ ಮೂರು ಪಟ್ಟು ದಂಡ ವಿಧಿಸಿದ್ದಾಗಿ ಆರೋಪಿಸಿದರು.

ಬೆಸ್ಕಾಂ ಇಲಾಖೆ ಅಧಿಕಾರಿಗಳು 2,526 ರೂ. ಬಿಲ್ ಬದಲು 68,526 ರೂಪಾಯಿ ದಂಡದ ಬಿಲ್ ನೀಡಿದ್ದಾರೆ. ಕರೆಂಟ್ ಬಿಲ್ ಕಟ್ಟಲು ನಾನು ಸಿದ್ಧನಿದ್ದೇನೆ. ಲೈಟಿಂಗ್ ಹಾಕಿದ್ದಕ್ಕೆ ಹೆಚ್ಚು ಕರೆಂಟ್ ತೆಗೆದುಕೊಳ್ಳುವುದಿಲ್ಲ. ಅದು 1 ಕಿಲೋ ವ್ಯಾಟ್​ಗಿಂತ ಕಡಿಮೆ ಇರುತ್ತದೆ. ಆದರೆ ಇವರು 2.5 ಕಿಲೋ ವ್ಯಾಟ್​ಗೆ ಲೆಕ್ಕ ತೆಗೆದುಕೊಂಡಿದ್ದಾರೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. ಆದರೆ ಅವರು 71 ಯೂನಿಟ್​ಗೆ ಮೂರು ಪಟ್ಟು ದಂಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಸೂಟ್​ಕೇಸ್​ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್​ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ

ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದೇನೆ ಎಂದು ತಿಳಿಸಿದ ಕುಮಾರಸ್ವಾಮಿ, ನೀವು (ಬೆಸ್ಕಾಂ) ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ. ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್​​ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್​ ಬಿಲ್ ನೀಡಿದೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!