AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗುಟ್ಕಾ ತಯಾರಿಕೆ; ಪೊಲೀಸ್ ದಾಳಿಯಲ್ಲಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟ್ಕಾ ಜಫ್ತಿ

ಬಂಧಿತ ವ್ಯಕ್ತಿಗಳು ಪರವಾನಿಗೆ ಇಲ್ಲದೆ ಮಾವಾ ತಯಾರಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ದಾಳಿ ವೇಳೆ 35 ಕೆಜಿ ಮಾವಾ, 80ಕೆ.ಜಿ‌ ಅಡಿಕೆ, 2ಕೆ‌ಜಿ‌ ತಂಬಾಕು,23 ಕೆ.ಜಿ ಸುಣ್ಣ 2 ಮೊಬೈಲ್ ಸೇರಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟಖಾ ಜಫ್ತಿ ಮಾಡಿಕೊಳ್ಳಲಾಗಿದೆ.

ಅಕ್ರಮ ಗುಟ್ಕಾ ತಯಾರಿಕೆ; ಪೊಲೀಸ್ ದಾಳಿಯಲ್ಲಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟ್ಕಾ ಜಫ್ತಿ
ಅಕ್ರಮ ಗುಟ್ಕಾ ತಯಾರಕರನ್ನು ಬಂಧಿಸಿದ ಪೊಲೀಸರು
Follow us
guruganesh bhat
|

Updated on: May 22, 2021 | 8:12 PM

ವಿಜಯಪುರ: ಪರವಾನಗಿ ಇಲ್ಲದೇ ಗುಟ್ಕಾ ತಯಾರಿಸುತ್ತಿದ್ದ ಇಬ್ಬರನ್ನು ಜಿಲ್ಲೆಯ ಹಿಪ್ಪರಗಿ‌ ಪಟ್ಟಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಖಾದರ್​ ಬಾಷಾ, ಬಸವರಾಜ್ ಆವಟಿ ಎಂಬುವವರೇ ಬಂಧಿತ ವ್ಯಕ್ತಿಗಳಾಗಿದ್ದು, ಉಳಿದ ಆರೋಪಿಗಳಾದ ಮುಬಾರಕ್, ಸಂಗಮೇಶ್​ ಪರಾರಿಯಾಗಿದ್ದಾರೆ. ಅಕ್ರಮವಾಗಿ ತಯಾರಿಸಿದ್ದ 60 ಸಾವಿರಕ್ಕೂ ಹೆಚ್ಚು ಮೌಲ್ಯದ ಗುಟ್ಕಾ ವಸ್ತುಗಳನ್ನು ಬಂಧಿತ ವ್ಯಕ್ತಿಗಳಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ವ್ಯಕ್ತಿಗಳು ಪರವಾನಿಗೆ ಇಲ್ಲದೆ ಮಾವಾ ತಯಾರಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ದಾಳಿ ವೇಳೆ 35 ಕೆಜಿ ಮಾವಾ, 80ಕೆ.ಜಿ‌ ಅಡಿಕೆ, 2ಕೆ‌ಜಿ‌ ತಂಬಾಕು,23 ಕೆ.ಜಿ ಸುಣ್ಣ 2 ಮೊಬೈಲ್ ಸೇರಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟಖಾ ಜಫ್ತಿ ಮಾಡಿಕೊಳ್ಳಲಾಗಿದೆ.

ಲಾಕ್​ಡೌನ್​ ಇದ್ದರೂ ಸರ್ಕಾರಿ ಕಾರು ದುರ್ಬಳಕೆ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ರಾಜ್ಯ ಸರ್ಕಾರ ಲಾಕ್​ಡೌನ್ ವಿಧಿಸಿದೆ. ಬೇಕಾಬಿಟ್ಟಿಯಾಗಿ ಓಡಾಡಿದರೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಅನಗತ್ಯವಾಗಿ ಓಡಾಡುವ ಜನರಿಗೆ ದಂಡವನ್ನು ಹಾಕಿ, ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಪೊಲೀಸ್ ಸಿಬ್ಬಂದಿ ಯಾರಿಗೂ ಮುಲಾಜೇ ಮಾಡದೆ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಹೀಗೆ ಅನಗತ್ಯವಾಗಿ ಸರ್ಕಾರಿ ಕಾರು ದುರ್ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಯಾಗಿದೆ. ಹೀಗಿದ್ದೂ ಸರ್ಕಾರಿ ಸೇವೆಯಲ್ಲಿದ್ದ ಕಾರನ್ನು ದುರ್ಬಳಕೆ ಮಾಡಿಕೊಂಡು ಚಾಲಕನೊಬ್ಬ ಓಡಾಡುತ್ತಿದ್ದರು. ಅನಗತ್ಯವಾಗಿ ಕುಟುಂಬಸ್ಥರ ಜೊತೆ ಓಡಾಟ ನಡೆಸಿದ ಹಿನ್ನೆಲೆ ಪಿಡಬ್ಲೂಡಿಗೆ ಸೇರಿದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಘಟನೆ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆ ಸೇವೆಯಲ್ಲಿದ್ದ ಕಾರಿನಲ್ಲಿ ಕುಟುಂಬದವರನ್ನು ಕರೆದುಕೊಂಡು ಚಾಲಕ ಹೋಗುತ್ತಿದ್ದರು. ಸರ್ಕಾರಿ ಸೇವೆಯಲ್ಲಿ ಅಂತ ಬೋರ್ಡ್ ಇದ್ದಿದ್ದರಿಂದ ಪೊಲೀಸರು ಹಿಡಿಯಲ್ಲಾ ಅಂತ ಚಾಲಕ ಓಡಾಡುತ್ತಿದ್ದರು. ಆದರೆ ಚಾಲಕನ ದುರ್ಬಳಕೆಯನ್ನು ಗಮನಿಸಿದ ಪೊಲೀಸರು ಕಾರ್ನ ಸೀಜ್ ಮಾಡಿದ್ದಾರೆ.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪೊಲೀಸರು ವಾಹನಗಳ ತಪಾಸಣೆ ಮುಂದಾಗಿದ್ದರು. ಅನಗತ್ಯವಾಗಿ ಹೊರ ಬಂದವರಿಗೆ, ಮಾಸ್ಕ್ ಇಲ್ಲದೇ ಇರುವವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಕಲಬುರಗಿ ಜಿಮ್ಸ್ ಲಸಿಕಾ ಕೇಂದ್ರದಲ್ಲಿ ಇಂದು (ಮೇ 22) ಫ್ರಂಟ್​ಲೈನ್​ ವಾರಿಯರ್ಸ್, 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಸಿಬ್ಬಂದಿ ತಿಳಿಸಿದೆ. 18ರಿಂದ 44 ವರ್ಷದವರೆಗೆ ಇಂದು ಕೊವಿಡ್ ಲಸಿಕೆ ಇಲ್ಲ. ಇನ್ನು ಲಸಿಕೆ ಬಾರದ ಹಿನ್ನೆಲೆಯಲ್ಲಿ ಲಸಿಕೆ ಇಲ್ಲಾ ಅಂತ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ

ದೇಶದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ.12.45ಕ್ಕೆ ಕುಸಿತ: ಲವ್ ಅಗರ್ವಾಲ್ (Illegal gutka making Gutka Jafti worth over Rs 60 thousand police raids in Vijayapura)

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ