ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ

ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ
ಗೃಹಸಚಿವ ಡಾ.ಜಿ.ಪರಮೇಶ್ವರ್
Edited By: Rakesh Nayak Manchi

Updated on: Nov 07, 2023 | 2:30 PM

ಬೆಂಗಳೂರು, ನ.7: ಕಲಬುರಗಿಯಲ್ಲಿ ನಡೆದ ಕೆಇಎ (KEA) ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara), ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ ಎಂದಿದ್ದಾರೆ. ಅಲ್ಲದೆ, ಪೊಲೀಸರ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಡಿ.ಪಾಟೀಲ್ ಮೇಲೆ ಸಾಕಷ್ಟು ಕೇಸ್‌ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ನಡೆಸುವ ಕುರಿತು ಕೆಇಎ ತೀರ್ಮಾನ ಮಾಡುತ್ತದೆ. ನಮಗೆ ದೂರು ಕೊಟ್ಟ ಹಿನ್ನೆಲೆ ತನಿಖೆ ಮಾಡುತ್ತಿದ್ದೇವೆ. ಕಿಂಗ್‌ಪಿನ್‌ಗಳಿಗೆ ಭಯ ಇಲ್ಲದಿರುವುದಕ್ಕೆ ಈ ರೀತಿ ಮಾಡಿದ್ದಾರೆ. ಇನ್ನು ಮುಂದೆ ಹೀಗೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿಕ ಪರಮೇಶ್ವರ್​ ಸಿಎಂ: ಕಾಂಗ್ರೆಸ್​ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಸಚಿವ ರಾಜಣ್ಣ ಹೇಳಿಕೆ

ತನ್ನ ಮನೆಗೆ ಪೊಲೀಸರು ಎಂಟ್ರಿ ಕೊಡುತ್ತಿದ್ದಂತೆ ಕಿಂಗ್​ಪಿನ್ ಆರ್​ಡಿ ಪಾಟೀಲ್ ಕಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ರೀತಿ ಮಾಡುವುದು ಈತ ಮೊದಲೇನಲ್ಲ. ಪೊಲೀಸರು ಬಂದಾಗ ಕಂಪೌಂಡ್ ಹಾರೋ ಚಟ ಮಾಡಿಕೊಂಡಿರೋ ಆರ್ ಡಿ ಪಾಟೀಲ್, ಈ ಹಿಂದೆ ಪಿಎಸ್​ಐ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ಪೊಲೀಸರು ಬಂಧನ ಮಾಡಲು ಹೋದಾಗ ಇದೇ ರೀತಿ ಕಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದ.

ಸಿಐಡಿ ಅಧಿಕಾರಿಗಳನ್ನು ತಳ್ಳಿ ಹಿಂಬಾಗಿಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಆರ್​ಡಿ ಪಾಟೀಲ್, ಪೊಲೀಸರ ಜೊತೆ ಚೆಲ್ಲಾಟವಾಡುವ ಚಾಳಿ ಬೆಳಸಿಕೊಂಡಿದ್ದಾನೆ. ಪೊಲೀಸರ ಕೈಗೆ ಸಿಕ್ಕರೆ ಕಂಬಿ ಹಿಂದೆ ಹೋಗಬೇಕಾಗುತ್ತದೆ. ಸಾಕ್ಷಿಗಳು ನಾಶವಾಗಲಿ‌ ಅನ್ನೋ ಉದ್ದೇಶದಿಂದ ಈ ರೀತಿ ಕಳ್ಳಾಟವಾಡುತ್ತಿದ್ದಾನೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us