ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು: ಕ್ರಮ ಕೈಗೊಳ್ಳದ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ತರಾಟೆ

| Updated By: ganapathi bhat

Updated on: Jul 02, 2021 | 8:16 PM

ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಮಾಣಪತ್ರ ಸಲ್ಲಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದ್ದು, ಆಗಸ್ಟ್ 10ರ ಒಳಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಹೇಳಿದೆ.

ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು: ಕ್ರಮ ಕೈಗೊಳ್ಳದ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್​
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು ವಿಚಾರಕ್ಕೆ ಸಂಬಂಧಿಸಿ ಕ್ರಮಕೈಗೊಳ್ಳದ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 517 ಕಟ್ಟಡ ಗುರುತಿಸಲಾಗಿದೆ. ಆದರೆ, ಅದರ ತೆರವಿಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದು ಹೇಳಿದೆ.

ಅಷ್ಟೇ ಅಲ್ಲದೆ, ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮದ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸೂಚನೆ ನೀಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಮಾಣಪತ್ರ ಸಲ್ಲಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದ್ದು, ಆಗಸ್ಟ್ 10ರ ಒಳಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಹೇಳಿದೆ.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೀಸಲಾತಿ ವಿಚಾರ
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೀಸಲಾತಿ ಪಟ್ಟಿ ಪ್ರಕಟ ಹಿನ್ನೆಲೆಯಲ್ಲಿ, ಹೈಕೋರ್ಟ್​ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ರಾಜ್ಯ ಚುನಾವಣಾ ಆಯೋಗಕ್ಕೂ ಹೈಕೋರ್ಟ್​​ ನೋಟಿಸ್ ನೀಡಿದೆ. ಒಟ್ಟು 82 ಸ್ಥಾನ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 11 ಸ್ಥಾನಗಳ ಬದಲಿಗೆ 8 ಸ್ಥಾನ ಮೀಸಲಾತಿ ನೀಡಿಕೆ ಆರೋಪ ವ್ಯಕ್ತವಾಗಿತ್ತು. ಮೀಸಲಾತಿ ಪ್ರಮಾಣ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು.

ಬಸವರಾಜ ತೆರದಾಳ ಎಂಬುವರು ಈ ಸಂಬಂಧ ರಿಟ್ ಅರ್ಜಿ ಸಲ್ಲಿಸಿದ್ದರು. ಪರಿಶಿಷ್ಟ ಜಾತಿಗೆ ಅನ್ಯಾಯವಾಗಿದೆ ಎಂದು ಸ್ಥಾನ ಮೀಸಲು ನೀಡುವಲ್ಲಿ ಅನ್ಯಾಯದ ಆರೋಪ ಮಾಡಲಾಗಿತ್ತು. ಹೈಕೋರ್ಟ್ ಮೊರೆ ಹೋಗಿದ್ದ ಬಸವರಾಜ ತೆರದಾಳ ಅರ್ಜಿ ವಿಚಾರಣೆ ನಡೆಸಲಾಗಿದ್ದು, ಇದೀಗ ನೊಟೀಸ್ ಜಾರಿಗೊಳಿಸಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಆದೇಶ ಪಾಲಿಸಿದ ಬೆಂಗಳೂರು ಪೊಲೀಸರು; ಪತ್ರಿಕಾ ಪ್ರಕಟಣೆಗಳಲ್ಲಿ ಆರೋಪಿಯ ಹೆಸರು ಬಹಿರಂಗ ಇಲ್ಲ, ಫೋಟೊ ಬ್ಲರ್

ಕ್ರೌರ್ಯಕ್ಕೆ ಬಲಿಯಾದ ನಾಯಿಗೆ ಕೇರಳ ಹೈಕೋರ್ಟ್ ವಿಶಿಷ್ಟ ಗೌರವ: ಪ್ರಾಣಿ ಹಕ್ಕು ರಕ್ಷಣೆ ಸುಮೊಟೊ ಪ್ರಕರಣಗಳಿಗೆ In Re Bruno ಎಂದು ಮರುನಾಮಕರಣ

Published On - 7:38 pm, Fri, 2 July 21