AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮೊಬೈಲ್ ಟವರ್‌ಗಳಿಗೆ ದಂಡ ವಿಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್​ಸ್ಟಾಲೇಶನ್ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಕ್ರಮ ಮೊಬೈಲ್ ಟವರ್‌ಗಳಿಗೆ ದಂಡ ವಿಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ
TV9 Web
| Edited By: |

Updated on: Dec 11, 2023 | 11:39 AM

Share

ಬೆಂಗಳೂರು, ಡಿಸೆಂಬರ್ 11: ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್‌ಗಳನ್ನು (Telecom Towers) ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಈ ನಿರ್ದೇಶನ ನೀಡಿದ್ದಾರೆ. ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಶನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ.ವರೆಗೆ, ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ, ನಗರ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಪಂಚಾಯ್ತಿ ಮಿತಿಗಳಲ್ಲಿ 35,000 ರೂ. ಇನ್​ಸ್ಟಾಲೇಶನ್ ಚಾರ್ಜಸ್ ವಿಧಿಸಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 8,000 ಇಂತಹ ಟವರ್‌ಗಳು ಇದ್ದು ಮತ್ತು ರಾಜ್ಯದಾದ್ಯಂತ 48,000 ಇವೆ.

ಇದನ್ನೂ ಓದಿ: ಇಂದಿನಿಂದ ಬೆಂಗಳೂರಿನಿಂದ ನಂದಿ ಹಿಲ್ಸ್​ಗೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ

ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್​ಸ್ಟಾಲೇಶನ್ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ರಮೇಶ್ ಉಲ್ಲೇಖಿಸಿದ್ದರು. ಅಳವಡಿಕೆ ಶುಲ್ಕವನ್ನು ಇತರೆ ತೆರಿಗೆಯೊಂದಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಂದ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತವೆ. ಕರ್ನಾಟಕ ಕೂಡ ಶುಲ್ಕ ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​