ಕೆಂಪೇಗೌಡ ಏರ್ಪೋಟ್ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಸಿಕ್ಕವು ಇಲಿ, ಹಲ್ಲಿ-ಆಮೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದೊಡ್ಡ ಪ್ರಮಾಣದ ಅಕ್ರಮ ಪ್ರಾಣಿ ಸಾಗಾಣಿಕೆ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಕೌಲಾಲಂಪುರದಿಂದ ಬಂದ ವಿಮಾನದಲ್ಲಿ 40 ಪೆಟ್ಟಿಗೆಗಳಲ್ಲಿ ವಿವಿಧ ಜಾತಿಯ ಆಮೆಗಳು, ಹಲ್ಲಿಗಳು ಮತ್ತು ಇಲಿಗಳನ್ನು ಅಡಗಿಸಿಟ್ಟು ತರಲಾಗುತ್ತಿತ್ತು. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಅಕ್ರಮ ಪ್ರಾಣಿ ಸಾಗಾಟ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ದೇವನಹಳ್ಳಿ, ನವೆಂಬರ್ 15: ಅಕ್ರಮವಾಗಿ ವಿದೇಶದಿಂದ ಸಾಗಾಟ ಮಾಡುತ್ತಿದ್ದ ಪ್ರಾಣಿಗಳನ್ನು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Kempegowda International Airport) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವಂತಹ ಘಟನೆ ನಡೆದಿದೆ. ಪ್ರಾಣಿಗಳನ್ನ ತಂದಿದ್ದ ಇಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ ಹಾಗೂ ಕೆಂಪು ಇಲಿ ಸೇರಿದಂತೆ ಟ್ರಾಲಿ ಬ್ಯಾಗ್‌ನಲ್ಲಿ 40 ಬಾಕ್ಸ್‌ಗಳಲ್ಲಿದ್ದ ವಿವಿಧ ಬಗೆಯ ಪ್ರಾಣಿಗಳನ್ನು ವಶಕ್ಕೆ ಪಡೆಯಲಾಗಿದೆ.
ಏರ್‌ಪೋರ್ಟ್‌ನಲ್ಲಿ ಪರಿಶೀಲನೆ ವೇಳೆ ಬಾಕ್ಸ್‌ನಲ್ಲಿ ಪ್ರಾಣಿಗಳಿರುವುದು ಪತ್ತೆ ಆಗಿದೆ. ಕೌಲಲಾಂಪುರದಿಂದ MHO192 ವಿಮಾನದಲ್ಲಿ ಅಕ್ರಮವಾಗಿ ಪ್ರಾಣಿಗಳನ್ನು ತಂದಿದ್ದರು. ಸದ್ಯ ಅಕ್ರಮ ಪ್ರಾಣಿಗಳ ಸಾಗಾಟ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಒಳ ಉಡುಪಿನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಬಂದಿದ್ದ ಭೂಪ
ಅದೇ ರೀತಿಯಾಗಿ ಇತ್ತೀಚೆಗೆ ಕೌಲಲಾಂಪುರದಿಂದ ಕೆಂಪೇಗೌಡ ಏರ್ಪೋಟ್ಗೆ ಒಳ ಉಡುಪಿನಲ್ಲಿ ಚಿನ್ನವನ್ನ ಅಡಗಿಸಿಟ್ಟುಕೊಂಡು ಬಂದಿದ್ದ ವ್ಯಕ್ತಿಯನ್ನ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಒಂದೂವರೆ ಕೆಜಿ ಚಿನ್ನವನ್ನ ವಶಪಡಿಸಿಕೊಂಡಿದ್ದರು.
ಇದನ್ನೂ ಓದಿ: 6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್ಪೋರ್ಟ್ಗೆ ಬೆದರಿಕೆ ಸಂದೇಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋಟ್ಗೆ ಬಂದಿಳಿದಿದ್ದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಒಳ ಉಡುಪಿನಲ್ಲಿ ಎರಡು ಚಿನ್ನದ ಬಿಸ್ಕೆಟ್ಳನ್ನ ಅಡಗಿಸಿಟ್ಟಿದ್ದ. ಹೀಗಾಗಿ ಏರ್ಪೋಟ್ಗೆ ಬರ್ತಿದ್ದಂತೆ ಪರಿಶೀಲನೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಒಳ ಉಡುಪಿನಲ್ಲಿದ್ದ 1 ಕೆಜಿ 499 ಗ್ರಾಂ ತೂಕದ ಒಂದು ಕೋಟಿ ಮೌಲ್ಯದ ಚಿನ್ನದ ಬಿಸ್ಕೇಟ್ ಅನ್ನ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದರು. ಜೊತೆಗೆ ಆರೋಪಿಯನ್ನ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು ಆರೋಪಿಯನ್ನ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತನಾದ ಪಾಕಿಸ್ತಾನ ಪ್ರಜೆ ಬಳಿ ಇದೆ ಭಾರತದ ಪಾಸ್ಪೋರ್ಟ್!
ಇನ್ನು ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಒಂದೂವರೆ ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರು ಚಿನ್ನ ಸಾಗಾಣಿಕೆಗಾಗಿಯೆ ವಿಶೇಷವಾಗಿ ವಸ್ತ್ರಗಳನ್ನು ಮಾಡಿಸಿದ್ದರು. ಜೀನ್ಸ್ ಪ್ಯಾಂಟ್ ಟೀ ಶರ್ಟ್ಗಳಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಆರೋಪಿಗಳು ಅಕ್ರಮವಾಗಿ ಸಾಗಿಸುತ್ತಿದ್ದ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.