AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಅಪ್ಪ-ಮಗನಿಗೆ ಏಜೆಂಟ್ ಅಲ್ಲ.. ನಾನು ಮೋದಿ ಬೆಂಬಲಿಗ ಅಷ್ಟೇ : ಬಸನಗೌಡ ಪಾಟೀಲ್ ಯತ್ನಾಳ್

ನಾನು, ಸಿಎಂ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರನ ಏಜೆಂಟ್ ಆಗಿಲ್ಲ. ಭ್ರಷ್ಟಾಚಾರಶಾಹಿ ಕುಟುಂಬದ ವಿರುದ್ಧ ನಿರಂತರವಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಗುಡುಗಿದ್ದಾರೆ.

ನಾನು ಅಪ್ಪ-ಮಗನಿಗೆ ಏಜೆಂಟ್ ಅಲ್ಲ.. ನಾನು ಮೋದಿ ಬೆಂಬಲಿಗ ಅಷ್ಟೇ : ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಆಯೇಷಾ ಬಾನು
| Edited By: |

Updated on: Mar 15, 2021 | 3:02 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಟಾಂಗ್ ಕೊಟ್ಟಿದ್ದಾರೆ. ಸಿಎಂ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರನ ಏಜೆಂಟ್ ಆಗಿಲ್ಲ ನಾನು. ಭ್ರಷ್ಟಾಚಾರಶಾಹಿ ಕುಟುಂಬದ ವಿರುದ್ಧ ನಿರಂತರವಾಗಿ ನನ್ನ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಗುಡುಗಿದ್ದಾರೆ.

ಇದೇ ವೇಳೆ ಅವರು.. ನಾನು ಬಿಜೆಪಿ ಕಾರ್ಯಕರ್ತ, ನಾನು ಪ್ರಧಾನಿ ನರೇಂದ್ರ ಮೋದಿಗೆ ಮಾತ್ರ ಬೆಂಬಲಿಗ ಎನ್ನುವ ಮೂಲಕ ಸಿಎಂ ಕುಟುಂಬಕ್ಕೆ ಟಾಂಗ್ ಕೊಟ್ಟಿದ್ದಾರೆ. ಇನ್ನು ಸದನದಲ್ಲಿ ಭರವಸೆ ನೀಡಿರೋದಿಂದ ಆರು ತಿಂಗಳ ಕಾಲ ಮೀಸಲಾತಿ ಹೋರಾಟಕ್ಕೆ ಸದ್ಯ ತಾತ್ಕಾಲಿಕವಾಗಿ ಬ್ರೇಕ್ ನೀಡುತ್ತೇನೆ. ಆದ್ರೆ ಭ್ರಷ್ಟಾಚಾರದ ವಿರುದ್ಧ ಮಾತ್ರ ಹೋರಾಟ ಮಾಡುತ್ತೇನೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಸಿಎಂ ವಿರುದ್ಧ ಸಮರ ಸಾರಿದ್ದಾರೆ.

ಇನ್ನು ಈ ರೀತಿ ಸಿಎಂ ಬಿಎಸ್​ವೈ ವಿರುದ್ಧ ಯತ್ನಾಳ್ ಗುಡುಗಿರೋದು ಇದೇ ಮೊದಲೇನಲ್ಲ. ಅನೇಕ ಬಾರಿ ಅನೇಕ ಸಭೆಗಳಲ್ಲಿ ಯತ್ನಾಳ್ ತಮ್ಮದೇ ಪಕ್ಷದ ಸಚಿವರನ್ನು, ಸದಸ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ಕುರಿತು ನಾಲಿಗೆ ಹರಿಬಿಡುತ್ತಲೇ ಇರುವ ಯತ್ನಾಳ್, ಕೆಲ ತಿಂಗಳ ಹಿಂದೆ ನಡೆದ ಪಂಚಮಸಾಲಿ ಸಮುದಾಯದ ಸಮಾವೇಶದಲ್ಲಿ ರಾಜ್ಯ ಸರ್ಕಾರ ಹಾಗೂ ಸಿಎಂ ಬಿ.ಎಸ್​.ಯಡಿಯೂರಪ್ಪ ವಿರುದ್ಧ ಗುಡುಗಿದ್ದರು. ಇದಾದ ಬಳಿಕ ಹೈಕಮಾಂಡ್​ ದೆಹಲಿಗೆ ಬುಲಾವ್​ ನೀಡಿತ್ತು.

ಇದನ್ನೂ ಓದಿ: ವ್ಯಕ್ತಿ ವ್ಯಕ್ತಿತ್ವ | ವಿವಾದಗಳ ಮಾಲೆಯನ್ನೇ ಸುತ್ತಿಕೊಂಡ ಬೆಂಕಿಯುಗುಳುವ ನಾಯಕ ಬಸನಗೌಡ ಪಾಟೀಲ್ ಯತ್ನಾಳ್

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು