ಐಎಂಎ ಬಹುಕೋಟಿ ವಂಚನೆ ಪ್ರಕರಣ: ಕರ್ನಾಟಕ ಸರ್ಕಾರದಿಂದ ರೋಷನ್ ಬೇಗ್ ಆಸ್ತಿ ಜಪ್ತಿ; ವಿಳಂಬಕ್ಕೆ ಹೈಕೋರ್ಟ್ ಆಕ್ಷೇಪ

ಶಾಸಕರ ಆಸ್ತಿ ಜಪ್ತಿ ಮಾಡಲು ವಿಳಂಬ ಮಾಡಿದ್ದೀರಿ. ಅರ್ಧ ಡಜನ್ ಆದೇಶ ನೀಡಿದ ನಂತರ ಜಪ್ತಿ ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಿ ಶಾಲೆಗೆ ನೀಡಿದ ದೇಣಿಗೆ ಹಿಂತಿರುಗಿಸಿಲ್ಲ ಎಂದೂ ಹೈಕೋರ್ಟ್ ಆಕ್ಷೇಪಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಕರ್ನಾಟಕ ಸರ್ಕಾರದಿಂದ ರೋಷನ್ ಬೇಗ್ ಆಸ್ತಿ ಜಪ್ತಿ; ವಿಳಂಬಕ್ಕೆ ಹೈಕೋರ್ಟ್ ಆಕ್ಷೇಪ
ರೋಷನ್ ​ಬೇಗ್
TV9kannada Web Team

| Edited By: ganapathi bhat

Jul 07, 2021 | 7:29 PM

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ರೋಷನ್ ಬೇಗ್ ಆಸ್ತಿಯನ್ನು ರಾಜ್ಯ ಸರ್ಕಾರ ಜಪ್ತಿ ಮಾಡಿದೆ. ರೋಷನ್ ಬೇಗ್‌ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಖಾತೆಯನ್ನು ಕೂಡ ಜಪ್ತಿ ಮಾಡಲಾಗಿದೆ. ಐಎಂಎಯಿಂದ ಸರ್ಕಾರಿ ಶಾಲೆಗೆ 10 ಕೋಟಿ ರೂಪಾಯಿ ದೇಣಿಗೆ ನೀಡಲಾಗಿತ್ತು. ಹೀಗೆ ದೇಣಿಗೆ ನೀಡಿರುವುದರಿಂದ ಅದನ್ನು ಹಿಂದಿರುಗಿಸಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವಾದ ಮಂಡಿಸಿದ್ದಾರೆ.

ಶಾಸಕರ ಆಸ್ತಿ ಜಪ್ತಿ ಮಾಡಲು ವಿಳಂಬ ಮಾಡಿದ್ದೀರಿ. ಅರ್ಧ ಡಜನ್ ಆದೇಶ ನೀಡಿದ ನಂತರ ಜಪ್ತಿ ಮಾಡುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಿ ಶಾಲೆಗೆ ನೀಡಿದ ದೇಣಿಗೆ ಹಿಂತಿರುಗಿಸಿಲ್ಲ ಎಂದೂ ಹೈಕೋರ್ಟ್ ಆಕ್ಷೇಪಿಸಿದೆ.

ಠೇವಣಿದಾರರ ಹಣ ದೇಣಿಗೆ ಪಡೆದಿರುವುದು ಸರಿಯೇ? ಐಎಂಎ ಬಗ್ಗೆ ಮೃದು ಧೋರಣೆ ತಳೆದಿದ್ದೀರಿ ಎಂದು ಹೈಕೋರ್ಟ್‌ ಪ್ರಶ್ನೆ ಮಾಡಿದೆ. ಸರ್ಕಾರ ಸಕ್ಷಮ ಪ್ರಾಧಿಕಾರದೊಂದಿಗೆ ಸಹಕರಿಸುತ್ತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ, ದೇಣಿಗೆ ಹಿಂತಿರುಗಿಸುವ ಬಗ್ಗೆ ನಿಲುವು ತಿಳಿಸಲು ಸೂಚನೆ ನೀಡಿದೆ. ವಿಚಾರಣೆಯನ್ನು ಜುಲೈ 19ಕ್ಕೆ ಹೈಕೋರ್ಟ್ ಮುಂದೂಡಿದೆ.

ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಸಿಬಿಐ ಏಪ್ರಿಲ್ ತಿಂಗಳಲ್ಲಿ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧದ ಪೂರಕ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂಬ ಮಾಹಿತಿ ಸಿಕ್ಕಿತ್ತು. ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಚಾರ್ಚ್ಶೀಟ್ ಸಲ್ಲಿಸಿದ್ದು, ಅದರಲ್ಲಿ ಅಂದಿನ ಐಎಂಎ ಗ್ರೂಪ್ನ ಎಂಡಿ ಮನ್ಸೂರ್ ಖಾನ್, ರೋಶನ್ ಬೇಗ್ ಅವರ ಕಂಪನಿಯ ದಾನಿಶ್ ಪಬ್ಲಿಕೇಶನ್ಸ್ ಮತ್ತು ಇತರ ಹೆಸರುಗಳನ್ನು ಚಾರ್ಚ್ಶೀಟ್ನಲ್ಲಿ ನಮೂದಿಸಲಾಗಿತ್ತು.

ಇದನ್ನೂ ಓದಿ: ಐಎಂಎ ಬಹುಕೋಟಿ ಹಗರಣ: ರೋಷನ್ ಬೇಗ್ ವಿರುದ್ಧದ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

ರೋಷನ್ ಬೇಗ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಸುಪ್ರೀಂ ಕೋರ್ಟ್ ಸೂಚನೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada