IMA ಬಹುಕೋಟಿ ವಂಚನೆ, ಧರಣಿನಿರತ ಮಹಿಳೆ ತಲೆಗೆ ತಾಗಿದ ಕಲ್ಲು

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಶಾಪ್​ ಮುಂದೆ ಹೂಡಿಕೆದಾರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದರೆ ಪ್ರತಿಭಟನೆಗೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರೆ. ಪೊಲೀಸರ ಈ ನಡೆಗೆ ಹೂಡಿಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗೆ ಅನುಮತಿ ನೀಡದಿದ್ರೂ ಜನರು ಧರಣಿಗೆ ಮುಂದಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ. ಗುಂಪು ಚದುರಿಸಲು ಪೊಲೀಸರು ಯತ್ನಿಸಿದ್ದಾರೆ. ಆಕ್ರೋಶಗೊಂಡ ಮಹಿಳೆಯರಿಂದ ಪೊಲೀಸರ ಮೇಲೆ […]

IMA ಬಹುಕೋಟಿ ವಂಚನೆ, ಧರಣಿನಿರತ ಮಹಿಳೆ ತಲೆಗೆ ತಾಗಿದ ಕಲ್ಲು
Follow us
ಸಾಧು ಶ್ರೀನಾಥ್​
|

Updated on:Nov 17, 2019 | 10:20 PM

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಶಾಪ್​ ಮುಂದೆ ಹೂಡಿಕೆದಾರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಆದರೆ ಪ್ರತಿಭಟನೆಗೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರೆ. ಪೊಲೀಸರ ಈ ನಡೆಗೆ ಹೂಡಿಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗೆ ಅನುಮತಿ ನೀಡದಿದ್ರೂ ಜನರು ಧರಣಿಗೆ ಮುಂದಾಗಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ನಡೆದಿದೆ. ಗುಂಪು ಚದುರಿಸಲು ಪೊಲೀಸರು ಯತ್ನಿಸಿದ್ದಾರೆ. ಆಕ್ರೋಶಗೊಂಡ ಮಹಿಳೆಯರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಧರಣಿನಿರತ ಮಹಿಳೆ ಮುಮ್ತಾಜ್​ ಬೇಗಂ ತಲೆಗೆ ಕಲ್ಲು ತಾಗಿದೆ. ಶಿವಾಜಿನಗರ ನಿವಾಸಿ ಮುಮ್ತಾಜ್ ಬೇಗಂ ತಲೆಗೆ ಪೆಟ್ಟು ಬಿದ್ದು ರಕ್ತ ಸುರಿದಿದೆ. ಈಕೆ ಐಎಂಎ ಕಂಪನಿಯಲ್ಲಿ ₹5 ಲಕ್ಷ ಹಣ ಹೂಡಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಡಿಸಿಪಿ ಭೇಟಿ: ಘಟನಾ ಸ್ಥಳಕ್ಕೆ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರತಿಭಟನೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನೆಯಾಗಿದೆ. ಕೆಲ ಕಿಡಿಗೇಡಿಗಳು ವಾಟ್ಸಾಪ್​ನಲ್ಲಿ IMA ಕಚೇರಿ ಬಳಿ ಸಭೆ ನಡೆಸೋದಾಗಿ ಸಂದೇಶ ನೀಡಿದ್ದಾರೆ. ಮಿಸ್​ ಗೈಡ್​ನಿಂದ ಹೂಡಿಕೆದಾರರು ಜಮಾವಣೆಗೊಂಡಿದ್ದಾರೆ.

ಈಗಾಗಲೆ IMA ಪ್ರಕರಣ ಸಿಬಿಐ ತನಿಖೆಗೆ ಹಸ್ತಾಂತರ ಮಾಡಲಾಗಿದೆ. ಹೂಡಿಕೆದಾರರಿಗೆ ನ್ಯಾಯ ಸಮ್ಮತವಾದ ಪರಿಹಾರ ಸಿಗಲಿದೆ ಎಂದು ಸುಳ್ಳು ಮಾಹಿತಿ ಹರಿದಾಡಿದೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಾ.ಶರಣಪ್ಪ ಹೇಳಿದ್ದಾರೆ.

Published On - 6:32 pm, Sun, 17 November 19

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ