AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಬರಗಾಲ ಪರಿಸ್ಥಿತಿ ಮಧ್ಯೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಮುಂಗಾರು ಮಳೆ: ಕರ್ನಾಟಕದಲ್ಲಿ ಮುಂಗಾರು ಆರಂಭದಲ್ಲೇ ಕೈಕೊಟ್ಟಿದೆ. ಬರಗಾಲ ಪರಿಸ್ಥಿತಿ ಕಾಡುತ್ತಿರುವ ಮಧ್ಯೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಹಾಗಾದ್ರೆ, ಮಳೆ ಎಲ್ಲೆಲ್ಲಿ ಆಗಲಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

Karnataka Weather Forecast: ಬರಗಾಲ ಪರಿಸ್ಥಿತಿ ಮಧ್ಯೆ  ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jul 19, 2026 | 5:13 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ಮಧ್ಯೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ
  • ಕರ್ನಾಟಕದ ಹಲವೆಡೆ ಮುಂದಿನ ಐದು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
  • ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂದಿನ 5 ದಿನ ಮಳೆ ನಿರೀಕ್ಷೆ

ಬೆಂಗಳೂರು, (ಜುಲೈ 19): ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೈಕೊಟ್ಟಿದ್ದ ವರುಣ ಶನಿವಾರ ಹಲವೆಡೆ ತಂಪೆರೆದಿದೆ. ಹೌದು.. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಿದ್ದು, ಮುಂದಿನ ಐದು ದಿನಗಳ (ಜುಲೈ 19ದಿಂದ ಜು.23) ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಆರೆಂಜ್ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಮತ್ತು ದಕ್ಷಿಣ ಒಳನಾಡು

ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಜೊತೆಗೆ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಸಾಮಾನ್ಯ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಸ್ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ