AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಚುರುಕು, ಮುಂದಿನ 5 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ

Karnataka Monsoon Rain: ಕರ್ನಾಟಕದಲ್ಲಿ ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಇದೀಗ ಚುರುಕುಗೊಳ್ಳುತ್ತಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.

Karnataka Weather Forecast: ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ಚುರುಕು, ಮುಂದಿನ 5 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ
Rain (ಪ್ರಾತಿನಿಧಿಕ ಚಿತ್ರ)
ರಮೇಶ್ ಬಿ. ಜವಳಗೇರಾ
|

Updated on: Jul 05, 2026 | 5:41 PM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಜೂನ್​​ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಚುರುಕು
  • ಮುಂದಿನ ಐದು ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ
  • ಹಲವು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ

ಬೆಂಗಳೂರು, (ಜುಲೈ 05): ಜೂನ್​ ತಿಂಗಳಲ್ಲಿ ಕರ್ನಾಟಕದಲ್ಲಿ (Karnataka) ಕೈಕೊಟ್ಟಿದ್ದ ಮುಂಗಾರು ಮಳೆ (Monsoon Rain) ಇದೀಗ ಜುಲೈ ಆರಂಭದಿಂದಲೇ ಚುರುಕುಗೊಂಡಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅದಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಭಾರಿ ಮಳೆ, ದಕ್ಷಿಣ ಒಳನಾಡು ಮತ್ತಯ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 5 ರಿಂದ 8 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ನೋಡಿ: ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ

ಕರಾವಳಿ- ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕವಾದ ಭಾರಿ ಮಳೆಯಾಗಲಿದೆ. ಮುಂಗಾರು ಮಾರುತಗಳು ಚುರುಕಾಗಿರುವುದರಿಂದ ಈ ಭಾಗಗಳಿಗೆ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು ಹವಾಮಾನ ವರದಿ

ಮುಂದಿನ 3-4 ದಿನಗಳ ಕಾಲ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಜೊತೆಗೆ ನಗರದ ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 27°C ರಿಂದ 29°C ಹಾಗೂ ಕನಿಷ್ಠ ತಾಪಮಾನ 23°C ಆಸುಪಾಸಿನಲ್ಲಿರಲಿದೆ.

ಒಳನಾಡು -ಉತ್ತರ ಒಳನಾಡು

ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕಲಬುರಗಿ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಭಾರಿ ಗಾಳಿಯೊಂದಿಗೆ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿತ್ರದುರ್ಗ, ಹಾಸನ ಹಾಗೂ ಮೈಸೂರು ಭಾಗಗಳಲ್ಲಿ ಮುಂಗಾರು ಮಳೆ ಸಾಧಾರಣವಾಗಿ ಮುಂದುವರಿಯಲಿದೆ.

ಒಟ್ಟಿನಲ್ಲಿ ಆರಂಭದಲ್ಲಿ ಕೈಕೊಟ್ಟಿರುವ ಮುಂಗಾರು ಮಳೆ ಜುಲೈ ಮೊಲದ ವಾರದಲ್ಲಿ ಚುರುಕು ಪಡೆದುಕೊಂಡಿದ್ದು ರೈತರಲ್ಲಿ ಸಂತಸ ಮನೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ