Karnataka Rains: ವಾರಾಂತ್ಯದಲ್ಲಿ ತಂಪೆರೆಯಲಿದ್ದಾನೆ ವರುಣ; ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬಿಸಿಲಿನ ಝಳಕ್ಕೆ ಕಂಗೆಟ್ಟಿರುವ ರಾಜಧಾನಿ ಬೆಂಗಳೂರು (Bengaluru) ಹಾಗೂ ರಾಜ್ಯದ ಹಲವೆಡೆ ವಾರಾಂತ್ಯದಲ್ಲಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಗುರುವಾರ ಮುನ್ಸೂಚನೆ ನೀಡಿದೆ.

Karnataka Rains: ವಾರಾಂತ್ಯದಲ್ಲಿ ತಂಪೆರೆಯಲಿದ್ದಾನೆ ವರುಣ; ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 18, 2023 | 5:57 PM

ಬೆಂಗಳೂರು: ಬಿಸಿಲಿನ ಝಳಕ್ಕೆ ಕಂಗೆಟ್ಟಿರುವ ರಾಜಧಾನಿ ಬೆಂಗಳೂರು (Bengaluru) ಹಾಗೂ ರಾಜ್ಯದ ಹಲವೆಡೆ ವಾರಾಂತ್ಯದಲ್ಲಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಗುರುವಾರ ಮುನ್ಸೂಚನೆ ನೀಡಿದೆ. ಮೇ 21 ಮತ್ತು 22 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗಾಳಿ, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾರಾಂತ್ಯದಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮೇ 20 ಮತ್ತು 21 ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ಇಲಾಖೆ ಹೇಳಿದೆ.

ಗುರುವಾರವೂ ರಾಜ್ಯದ ಹಲವು ಭಾಗಗಳಲ್ಲಿ ಒಣ ಹವೆ ಮುಂದುವರಿದಿದೆ. ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚಾಗಿದೆ.

ಇದನ್ನೂ ಓದಿ: Kodagu Rain: ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ವರುಣಾರ್ಭಟ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40.7 ಡಿಗ್ರಿ ದಾಖಲಾಗಿದ್ದರೆ, ಬಳ್ಳಾರಿಯಲ್ಲಿ 40.6, ರಾಯಚೂರಿನಲ್ಲಿ 40.2, ವಿಜಯಪುರದಲ್ಲಿ 39.2 ಹಾಗೂ ಗದಗದಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಬುಧವಾರ ಮಳೆಯಾಗಿತ್ತು. ಭಾರೀ ಗಾಳಿಯೊಂದಿಗೆ ಮಳೆಯಾಗಿತ್ತು. ಮರಗಳು, ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ