ಬೆಂಗಳೂರು ಸೇರಿ ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
Karnataka Rains; ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 5: ರಾಜ್ಯದ ಹಲವೆಡೆ ಮಂಗಳವಾರ ಉತ್ತಮ (Karnataka Rains) ಮಳೆಯಾಗಿದೆ. ಇನ್ನೂ 1 ವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಅಧಿಕಾರಿಗಳು ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಒಂದು ವಾರ ಕರಾವಳಿ ಜಿಲ್ಲೆಗಳಿಗೆ ಮತ್ತು ಒಳನಾಡಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು ಜಿಲ್ಲೆಯಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ 24 ಗಂಟೆ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದ ದಕ್ಷಿಣ ಭಾಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪೂರ್ವಭಾಗ, ಧಾರವಾಡ, ಹಾವೇರಿ, ಗದಗ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಅಬ್ಬರ; ಇಲ್ಲಿದೆ ಮಾಹಿತಿ
ಈ ಮಧ್ಯೆ, ಮಂಗಳವಾರ ಸಂಜೆಯಿಂದಲೇ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ. ಬೆಂಗಳೂರಿನ ಟೌನ್ಹಾಲ್, ಮೆಜೆಸ್ಟಿಕ್, ಕಾರ್ಪೊರೇಷನ್ ವೃತ್ತ, ಕೆ.ಆರ್.ಸರ್ಕಲ್, ಚಾಲುಕ್ಯ ಸರ್ಕಲ್, ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ ಸೇರಿ ಹಲವೆಡೆ ಮಳೆಯಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ವಾಹನ ಸವಾರರು ಮರದಾಡುವಂತಾಗಿದೆ.
ಇದನ್ನೂ ಓದಿ: ಉಡುಪಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕೆಂದುಕೊಂಡಿದ್ದೀರಾ? ಹಾಗಿದ್ದರೆ ತುಸು ಕಾಯುವುದು ಅನಿವಾರ್ಯ, ಕಾರಣ ಇಲ್ಲಿದೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆಯಾಗಿದ್ದು, ದೇವನಹಳ್ಳಿ ತಾಲೂಕಿನಾದ್ಯಂತ ಪವರ್ ಕಟ್ ಆಗಿದೆ. ಸುಮಾರು 2 ಗಂಟೆಯಿಂದ ವಿದ್ಯುತ್ ಕಟ್ ಆಗಿದೆ. ದೇವನಹಳ್ಳಿಯಲ್ಲಿ ಮಳೆ ನಡುವೆ ಕರೆಂಟ್ ಇಲ್ಲದೆ ಜನರು ಪರದಾಡುವಂತಾಗಿದೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ