Karnataka Rain: ರಾಜ್ಯಾದ್ಯಂತ 2 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
ರಾಜ್ಯಾದ್ಯಂತ ಎರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ, ಮಲೆನಾಡು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಸಾಧ್ಯತೆ ಇದ್ದು, ಆರೆಂಜ್ ಅಲಟ್೯ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಡಿಮೆ ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು
ಬೆಂಗಳೂರಿನ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನ 26 ಮತ್ತು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಕದ್ರಾ, ಗೋಕರ್ಣ, ಅಂಕೋಲಾ, ಔರಾದ್, ಕಾರವಾರ, ಸಿದ್ದಾಪುರ, ಯಲ್ಲಾಪುರ, ಮಂಕಿ, ಧರ್ಮಸ್ಥಳ, ನಾಪೋಕ್ಲು, ಕುಮಟಾ, ಮಂಚಿಕೆರೆ, ಲಿಂಗನಮಕ್ಕಿ, ಪೊನ್ನಂಪೇಟೆ, ಕುಂದಾಪುರ, ಹಾಸನ, ಜಯಪುರ, ವಿರಾಜಪೇಟೆಯಲ್ಲಿ ಮಳೆಯಾಗಿದೆ. ಗೇರುಸೊಪ್ಪ ಹಾಗೂ ಭಾಗಮಂಡಲದಲ್ಲಿ 7ಸೆಂ.ಮೀನಷ್ಟು ಮಳೆ ಸುರಿದಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ. ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಮಳೆ ಬರುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ ಗರಿಷ್ಠ ಉಷ್ಣಾಂಶ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.