Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​
ಮಳೆImage Credit source: The Hindu
Follow us
|

Updated on:Aug 28, 2024 | 7:41 AM

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಕೊಟ್ಟಿಗೆಹಾರ, ಪುತ್ತೂರು, ಭಾಗಮಂಡಲ, ಆಗುಂಬೆ, ಮಂಕಿ, ಶಿರಾಲಿ, ಲಿಂಗನಮಕ್ಕಿ, ಮಾಣಿ, ಸಿದ್ದಾಪುರ, ಗೇರುಸೊಪ್ಪ, ಬೆಳ್ತಂಗಡಿ, ಶೃಂಗೇರಿ, ಪೊನ್ನಂಪೇಟೆ, ಹೊನ್ನಾವರ, ಉಪ್ಪಿನಂಗಡಿ, ಕಳಸ, ಹುಂಚದಕಟ್ಟೆ, ಕಮ್ಮರಡಿ, ಮೂರ್ನಾಡು, ನಾಪೋಕ್ಲು, ಪಣಂಬೂರು, ಉಡುಪಿ, ಮಂಗಳೂರು, ಕುಮಟಾದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ

ಯಲ್ಲಾಪುರ, ಬೆಳಗಾವಿ, ಮೂಡಿಗೆರೆ, ಜಯಪುರ, ನಿಪ್ಪಾಣಿ, ಗೋಕರ್ಣ, ಕೋಟ, ಮುಂಡಗೋಡು, ಸಂಕೇಶ್ವರ, ಹುಕ್ಕೇರಿ, ಕೋಟ, ಮಾನ್ವಿ, ಮಸ್ಕಿ, ಧಾರವಾಡ, ಬೈಲಹೊಂಗಲ, ಶಿವಮೊಗ್ಗ, ಎನ್​ಆರ್​ಪುರ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:37 am, Wed, 28 August 24