Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವಾರಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರ, ಕೋಟ, ಆಗುಂಬೆ, ಧರ್ಮಸ್ಥಳ, ಉಡುಪಿ, ಲಿಂಗನಮಕ್ಕಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 9ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ
ಮಳೆ
Image Credit source: India Today

Updated on: Jul 03, 2024 | 7:54 AM

ಈಗಾಗಲೇ ಮುಂಗಾರು ಆರಂಭವಾಗಿ ತಿಂಗಳು ಕಳೆದಿದೆ, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು. ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 7ರ ಬಳಿಕ ಕರಾವಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ಜುಲೈ 5ರ ಬಳಿಕ ಈ ಜಿಲ್ಲೆಗಳಲ್ಲಿ ಹೆಚ್ಚಲಿದೆ ಮಳೆ ಪ್ರಮಾಣ

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರ, ಕೋಟ, ಆಗುಂಬೆ, ಧರ್ಮಸ್ಥಳ, ಉಡುಪಿ, ಲಿಂಗನಮಕ್ಕಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಭಾಗಮಂಡಲ, ಉಪ್ಪಿನಂಗಡಿ, ಕದ್ರಾ, ಸಿದ್ದಾಪುರ, ಶಿರಾಲಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಮಂಗಳೂರು, ಮಾಣಿ, ನಾಪೋಕ್ಲು, ಪೊನ್ನಂಪೇಟೆ, ಗೇರುಸೊಪ್ಪ, ಬೆಳ್ತಂಗಡಿ, ಮಂಕಿ, ಪುತ್ತೂರು, ಕಿರವತ್ತಿ, ಯಲ್ಲಾಪುರ, ಕಮ್ಮರಡಿ, ಕಳಸ, ಹುಂಚದಕಟ್ಟೆ, ಕೊಪ್ಪ, ಶೃಂಗೇರಿ, ಮೂರ್ನಾಡು, ಗೋಕರ್ಣ, ತಾಳಗುಪ್ಪ, ಅಂಕೋಲಾ, ಹೊನ್ನಾವರದಲ್ಲಿ ಮಳೆಯಾಗಿದೆ.

ಚಿಕ್ಕಮಗಳೂರು, ಸೋಮವಾರಪೇಟೆ, ಗೌರಿಬಿದನೂರು, ಬಂಡೀಪುರ, ಅರಕಲಗೂಡು, ಕುಮಟಾ, ಮುಲ್ಕಿ, ಹಾವೇರಿ, ರಾಯಲ್ಪಾಡು, ಬೇಲೂರು, ಕೊಟ್ಟೂರು, ಎನ್​ಆರ್​ ಪುರ, ಮಾಗಡಿ, ದಾವಣಗೆರೆ, ತರೀಕೆರೆಯಲ್ಲೂ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us