Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್​ 6ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ

ದೀಪಾವಳಿ ಹಬ್ಬ ಕಳೆದರೂ ಮಳೆಯ ಆರ್ಭಟ ಇನ್ನೂ ನಿಂತಿಲ್ಲ, ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ,ಕಲಬುರಗಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನವೆಂಬರ್​ 6ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ
ಮಳೆImage Credit source: Skymet Weather
Follow us
ನಯನಾ ರಾಜೀವ್
|

Updated on: Nov 03, 2024 | 7:50 AM

ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ,ಕಲಬುರಗಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ನಾಪೋಕ್ಲು, ಕಮ್ಮರಡಿ, ಕಳಸ, ಲಿಂಗನಮಕ್ಕಿ, ಮದ್ದೂರು, ಕೊಪ್ಪ, ಶೃಂಗೇರಿ, ಸುಳ್ಯ, ಶಿರಾಲಿ, ಸಿದ್ದಾಪುರ, ಮಾಣಿ, ಜೋಯಿಡಾ, ಪೊನ್ನಂಪೇಟೆ, ಹಾರಂಗಿ, ಕೊಟ್ಟಿಗೆಹಾರ, ಬಂಡೀಪುರ, ಮಂಡ್ಯ, ಸೋಮವಾರಪೇಟೆ, ಆಗುಂಬೆ, ಹುಮನಾಬಾದ್​ನಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಯಪುರದಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಕೂಡ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ; ಮಲೆನಾಡು, ಕರಾವಳಿ ಸೇರಿ 20 ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಹೊನ್ನಾವರದಲ್ಲಿ32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 33.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ