Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ರೆಡ್ ಅಲರ್ಟ್​

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ರೆಡ್ ಅಲರ್ಟ್​
ಮಳೆ
Image Credit source: PTI

Updated on: Sep 24, 2024 | 7:39 AM

ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕಾರವಾರ, ಹಳಿಯಾಳ, ಮಧುಗಿರಿ, ಶಿರಾಲಿ, ಸೇಡಬಾಳ, ಕೋಟ, ಉಡುಪಿ, ನಿಪ್ಪಾಣಿ, ಸೈದಾಪುರ, ಸಂಕೇಶ್ವರ, ಧಾರವಾಡ, ರಾಯಭಾಗ, ಚಿಕ್ಕೋಡಿ, ಕೊಪ್ಪ, ಕುಂದಾಪುರ, ಮಂಕಿ, ಗೋಕರ್ಣ, ಝಲ್ಕಿ, ಔರಾದ್, ಕುಕನೂರು, ನರಗುಂದ, ಇಳಕಲ್​ನಲ್ಲಿ ಮಳೆಯಾಗಿದೆ.

ರಬಕವಿ, ಹಿಡಕಲ್, ಹುಕ್ಕೇರಿ, ಹೊನ್ನಾವರ, ಅಂಕೋಲಾ, ಕಲಘಟಗಿ, ಬೆಳಗಾವಿ, ಶಿರಹಟ್ಟಿ, ನೆಲೋಗಿ, ಮಹಾಲಿಂಗಪುರ, ಮುಂಡಗೋಡು, ಮಂಗಳೂರು, ಜೇವರ್ಗಿ, ಮೂಲ್ಕಿ, ಸಿಂದಗಿ, ಆಲಮಟ್ಟಿ, ಗದಗ, ಗಬ್ಬೂರು, ಹುಂಚದಕಟ್ಟೆ, ಕಳಸ, ಕೆಆರ್​ನಗರ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 31.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us