Karnataka Rains: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ

ಕರ್ನಾಟಕದಾದ್ಯಂತ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ
ಮಳೆ
Image Credit source: PTI

Updated on: Sep 29, 2024 | 8:09 AM

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ರಾಮನಗರದಲ್ಲಿ ಮಳೆಯಾಗಲಿದೆ.

ಉಡುಪಿ, ಕುಮಟಾ, ರಾಯಲ್ಪಾಡು, ಅಂಕೋಲಾ, ಕುಂದಾಪುರ, ಮಂಕಿ, ಕಾರ್ಕಳ, ಗೇರುಸೊಪ್ಪ, ಕೊಲ್ಲೂರು, ಶಿರಾಲಿ, ಕ್ಯಾಸಲ್​ರಾಕ್, ಕೋಟ, ಬನವಾಸಿ, ಪಣಂಬೂರು, ಭಾಗಮಂಡಲ, ಲಿಂಗನಮಕ್ಕಿ, ಕೊಪ್ಪ, ಮೈಸೂರು, ಕಡೂರು, ಕಮ್ಮರಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಶನಿವಾರ ರಾತ್ರಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 29.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

ಹೊನ್ನಾವರದಲ್ಲಿ29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ8 ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us