Karnataka Weather Forecast: ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಮುಂಗಾರು ಮಳೆ: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾದ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಮೂರ್ನಾಲ್ಕು ದಿನ ರಾಜ್ಯದ ಹಲವೆಡೆ ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು IMD ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು, (ಮೇ 26): ಕರ್ನಾಟಕದ (Karnataka) ಹಲವೆಡೆ ಪೂರ್ವ ಮುಂಗಾರು ಮಳೆ (Pre Monsoon) ಭರ್ಜರಿಯಾಗುತ್ತಿದ್ದು, ಇದು ಈ ತಿಂಗಳು ಅಂತ್ಯ ಅಂದರೆ ಜೂನ್ 30ರ ವರೆಗೂ ಮುಂದುವರೆಯಲಿದೆ. ಹೌದು…ಜೂನ್ 3ರ ವರೆಗೂ ರಾಜ್ಯದ ವಿವಿದೆಡೆ ಗುಡುಗು, ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಆಲಿಕಲ್ಲು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ (ಮೇ 27) ‘ಯೆಲ್ಲೋ (Yellow Alert) ಹಾಗೂ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಮುಖ್ಯಾಂಶಗಳು
- ಕರ್ನಾಟಕದ ಹವಾಮಾನ ವರದಿ
- ಮೇ ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ
- ಉತ್ತರ, ದಕ್ಷಿಣ ಹಾಗೂ ಕರಾವಳಿ ಕರ್ನಾಟದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ
- ರಾಜ್ಯದ ಹಲವೆಡೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ನಿಡಿದ ಹವಾಮಾನ ಇಲಾಖೆ
ಮೇ 30ರ ವರೆಗೂ ಮಳೆ
26th to 30th May 2026 & at one or two places over NIK on 29th & 30th May 2026. Thunderstorm accompanied with lightning likely to occur at one or two places over Coastal Karnataka from 26th to 30th May 2026. #KSNDMC #KarnatakaRains #premonsoon
— Karnataka State Natural Disaster Monitoring Centre (@KarnatakaSNDMC) May 26, 2026
ಮೇ 26 ರಿಂದ 28 ರವರೆಗೆ ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇನ್ನು ಮೇ 26 ರಿಂದ 30, 2026 ರವರೆಗೆ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ವಿದ್ಯಾರ್ಥಿಗಳು, ಶಿಕ್ಷಕರಿಗೂ ಡಿಜಿಟಲ್ ಹಾಜರಿ ಕಡ್ಡಾಯ
ಬೆಂಗಳೂರು ನಗರಕ್ಕೆ ಮುನ್ಸೂಚನೆ
ಇಂದು (ಮೇ 26) ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಮಧ್ಯಮ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್
#ಮಳೆ #ಮುನ್ನೆಚ್ಚರಿಕೆ :#rainfall #Warning for North & South Interior #Karnataka#Lightning #Thunderstorm #KSNDMC@KarnatakaVarthe #KarnatakaRains #Premonsoon@deodcbagalkote @DCKalaburagi @DCVijayapura @KodaguDC @DEO_CHIKMAGALUR @DcDeoHassan @DCMysuru @DCTumakuru @ChitradurgaDeo pic.twitter.com/iOil0VhTz3
— Karnataka State Natural Disaster Monitoring Centre (@KarnatakaSNDMC) May 26, 2026
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 26 ಮತ್ತು 27ರಂದು ಭಾರೀ ಮಳೆ (64.5mm – 115.5mm) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಯೆಲ್ಲೊ ಅಲರ್ಟ್ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ
#ಆಲಿಕಲ್ಲುಮಳೆ ಎಚ್ಚರಿಕೆ: #Hailstorm #Warning for North Interior #Karnataka : #Orange #Alert #Rainfall #Lightning #Thunderstorm #KSNDMC@deodcbagalkote @DCKalaburagi @DCVijayapura pic.twitter.com/Klhx1t5Ejs
— Karnataka State Natural Disaster Monitoring Centre (@KarnatakaSNDMC) May 26, 2026
ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 27 ರಂದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 50-60 ಕಿಮೀ ತಲುಪುವ ಸಾದ್ಯತೆಯಿದ್ದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ IMD ಆರೆಂಜ್ ಅಲರ್ಟ್ ಘೋಷಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:13 pm, Tue, 26 May 26





