Karnataka Rains: ಉಡುಪಿ, ಉತ್ತರಕನ್ನಡ ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ

|

Updated on: Jun 14, 2024 | 7:47 AM

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳುತ್ತಿದೆ. ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು, ಕರಾವಳಿಯಲ್ಲಿ ದುರ್ಬಲವಾಗಿತ್ತು. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಉಡುಪಿ, ಉತ್ತರಕನ್ನಡ ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯ ಮುನ್ಸೂಚನೆ
ಮಳೆ
Image Credit source: OYO
Follow us on

ಕರ್ನಾಟಕದಲ್ಲಿ ಮುಂಗಾರು ತೀವ್ರಗೊಳ್ಳುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ,ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ನಾರಾಯಣಪುರ, ಕುಷ್ಟಗಿ, ಗೋಕರ್ಣ, ನಲ್ವತವಾಡ, ಲಿಂಗಸುಗೂರು, ಬಿಳಗಿ, ಸಿಂಧನೂರು, ಕುಮಟಾ, ಅಂಕೋಲಾ, ಕಕ್ಕೇರಿ, ಕಾರವಾರ, ಹುಣಸಗಿ, ಬಾಗಲಕೋಟೆ, ಕುರ್ಡಿ, ಗಂಗಾವತಿ, ತಾವರಗೇರಾ, ಆಗುಂಬೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಳಗಾವಿ, ಬೀದರ್, ರಾಯಚೂರು ಸೇರಿದಂತೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ನಿರೀಕ್ಷೆ

ಬೇವೂರು, ಮುದಗಲ್, ಮಹಾಲಿಂಗಪುರ, ಮಾನ್ವಿ, ಶೃಂಗೇರಿ, ತ್ಯಾಗರ್ತಿ, ಸೋಮವಾರಪೇಟೆ, ಹಳಿಯಾಳ, ಗೋಕಾಕ್, ಇಳಕಲ್, ರಾಯಭಾಗ, ಬಾದಾಮಿ, ಲೋಕಾಪುರ, ಬಾಳೆಹೊನ್ನೂರು, ಭಾಗಮಂಡಲ, ಕೊಟ್ಟಿಗೆಹಾರ, ಕುಶಾಲನಗರ, ಹಗರಿಬೊಮ್ಮನಹಳ್ಳಿ, ಕೊಪ್ಪದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನದಿಂದ ಮಳೆಯಾಗುತ್ತಿದೆ, ಶುಕ್ರವಾರವೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ, ಮೋದಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠಢ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಗದಗದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:47 am, Fri, 14 June 24