Karnataka Weather: ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

|

Updated on: Jan 27, 2025 | 7:19 AM

ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಫೆಬ್ರವರಿ 1 ರಿಂದ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ
Image Credit source: Getty Images
Follow us on

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಇದ್ದು, ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ತಮಿಳುನಾಡು, ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಕರ್ನಾಟಕದಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ವಿಜಯಪುರ, ಬೀದರ್​ನಲ್ಲಿ ಚಳಿಯೋ ಚಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಳ ಸಾಧ್ಯತೆ

ಹೊನ್ನಾವರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.0 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ