Karnataka Rains: ಕರ್ನಾಟಕದ ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ

ಕರ್ನಾಟಕದಾದ್ಯಂತ ಮಳೆ ಮುಂದುವರೆದಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ,ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Sep 04, 2024 | 7:39 AM

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ,ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳದಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಕಮ್ಮರಡಿ, ಆಗುಂಬೆ, ಲಿಂಗನಮಕ್ಕಿ, ಕದ್ರಾ, ಸಿದ್ದಾಪುರ, ಔರಾದ್, ಗೇರುಸೊಪ್ಪ, ಧರ್ಮಸ್ಥಳ, ಕಳಸ, ಪುತ್ತೂರು, ಮಾಣಿ, ಬೆಳ್ತಂಗಡಿ, ಜಯಪುರ, ಭಾಗಮಂಡಲ, ಕೊಪ್ಪ, ಸೋಮವಾರಪೇಟೆ, ಮಂಗಳೂರು, ಯಲ್ಲಾಪುರ, ಇಂಡಿ, ಸಿಂದಗಿ, ಶೋರಾಪುರ, ಲೋಂಡಾ, ಸೈದಾಪುರ, ಹಾರಂಗಿ, ಕೊಟ್ಟಿಗೆಹಾರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆ

ಉಪ್ಪಿನಂಗಡಿ, ಅಂಕೋಲಾ, ಕಾರ್ಕಳ, ಕುಶಾಲನಗರ, ಬನವಾಸಿ, ಶಿರಾಲಿ, ಮುಲ್ಕಿ, ದೇವದುರ್ಗ, ಹಿರೇಕೆರೂರು, ಮಂಠಾಳ, ರಾಮನಗರ, ಹಗರಿಬೊಮ್ಮನಹಳ್ಳಿ, ಕುಣಿಗಲ್, ಪೊನ್ನಂಪೇಟೆ, ಮೂಡಿಗೆರೆ, ಎನ್​ಆರ್​ಪುರ, ಚಾಮರಾಜನಗರ, ಶೃಂಗೇರಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 23.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 23.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ