Karnataka Rains: ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

| Updated By: ಗಣಪತಿ ಶರ್ಮ

Updated on: Jul 17, 2023 | 8:54 PM

ಬುಧವಾರದವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ (64.5 ಮಿ.ಮೀ.ನಿಂದ 115.5 ಮಿ.ಮೀ) ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

Karnataka Rains: ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಜುಲೈ 17: ಕರಾವಳಿ ಕರ್ನಾಟಕದಲ್ಲಿ (Coastal Karnataka) ಮೂರು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಬುಧವಾರದವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ (64.5 ಮಿ.ಮೀ.ನಿಂದ 115.5 ಮಿ.ಮೀ) ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಗುರುವಾರ ಮತ್ತು ಶುಕ್ರವಾರ ಕೂಡ ಕರಾವಳಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗುವ (115.6 ಮಿ.ಮೀ ನಿಂದ 204.4 ಮಿ.ಮೀ) ಸಾಧ್ಯತೆ ಇದೆ. ಹೀಗಾಗಿ ಆ ದಿನಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ, ಧಾರವಾಡ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಬುಧವಾರ, ಗುರುವಾರ ಮತ್ತು ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: Drinking Water: ದಕ್ಷಿಣ ಬೆಂಗಳೂರು ವ್ಯಾಪ್ತಿಯ ಹೆಚ್ಚಿನ ಕಡೆಗಳ ನೀರು ಕುಡಿಯಲು ಯೋಗ್ಯವಲ್ಲ; ಬಿಬಿಎಂಪಿ ಸಮೀಕ್ಷೆ

ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಬಹುದೆಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Mon, 17 July 23