ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: ಸಿದ್ದರಾಮಯ್ಯ 

ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: ಸಿದ್ದರಾಮಯ್ಯ 
ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: ಸಿದ್ದರಾಮಯ್ಯ 
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on: Oct 07, 2024 | 5:16 PM

ಬೆಂಗಳೂರು, ಅಕ್ಟೋಬರ್​ 07: ಗುರುವಾರ ವಾಲ್ಮೀಕಿ ಜಯಂತಿ ಹಿನ್ನೆಲೆ ಅಕ್ಟೋಬರ್ 10ರಂದು ನಿಗದಿಯಾಗಿದ್ದ ಸಂಪುಟ ಸಭೆ ರದ್ದಾಗಿದೆ. ಅಕ್ಟೋಬರ್​ 18ರಂದು ಸಚಿವ ಸಂಪುಟ ಸಭೆ ನಡೆಸಲಾಗುವುದು. ಅಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಚರ್ಚಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.  ವಿಧಾನಸೌಧದಲ್ಲಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಈ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಸಂಸದರು, ಶಾಸಕರ ಜೊತೆ ಸಭೆ ನಡೆಸಿದ್ದೇನೆ. ಜಾತಿಜನಗಣತಿ ವರದಿ ಜಾರಿ ಮಾಡುವಂತೆ ಮನವಿ ಪತ್ರ ನೀಡಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಜಾತಿಜನಗಣತಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ

ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

2013 – 18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ.

ಇದನ್ನೂ ಓದಿ: ಸರ್ಕಾರ ಬಿದ್ದರೆ ಬೀಳಲಿ ಜಾತಿಗಣತಿ ಜಾರಿ ಮಾಡಲೇಬೇಕು: ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಹೆಚ್​ಡಿ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದಿದ್ದಾರೆ.

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದು: ಮತ್ತೊಮ್ಮೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು; ಮುಖ್ಯಮಂತ್ರಿ ರೇಸ್​ನಲ್ಲಿ ಸತೀಶ್ ಜಾರಕಿಹೊಳಿ ಹೆಸರು!

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್