ಉತ್ತರ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ

|

Updated on: Apr 01, 2024 | 7:23 AM

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್​​ ಇರುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us on

ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಬೆಳಗಾವಿ (Belagavi), ಬಾಗಲಕೋಟೆ (Bagalkote) ಮತ್ತು ವಿಜಯಪುರ (Vijayapur) ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ (Rain). ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಇನ್ನು ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್​ 3 ರಿಂದ 5ರ ವರೆಗೆ ಉಷ್ಣ ಹವೆ ಬೀಸಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿದಿನ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುತ್ತಿದೆ.

ಮಾರ್ಚ್​ 31 ರಂದು ಕಲಬುರಗಿ ಜಿಲ್ಲೆಯಲ್ಲಿ​ ಅತ್ಯಧಿಕ 41.4 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ 17.08 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್​ ದಾಟಿದೆ.

ಬೆಂಗಳೂರು ಹವಾಮಾನ

ಮುಂದಿನ 24 ಗಂಟೆ ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್​​ ಇರುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ 41° ಡಿಗ್ರಿ ಸೆಲ್ಸಿಯಸ್ ತಲುಪಿದ ತಾಪಮಾನ; ಹೈರಾಣಾದ ಗಣಿನಾಡಿನ ಜನ

ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಜನ ಬಿಸಿಲ ಬೇಗೆಯಿಂದಾಗಿ ಮನೆಯಿಂದ ಹೊರ ಬಾರದೆ ಇರುವುದರಿಂದ ರಸ್ತೆಗಳು ಬಿಕೋ ಎನ್ನುತ್ತಿವೆ. ಅನಿವಾರ್ಯ ಸಂದರ್ಭಗಳಲ್ಲಿ ಜನ ಹೊರಹೋಗುವುದಿದ್ದರೂ ಛತ್ರಿ ಹಿಡಿದು, ಮುಖಕ್ಕೆ‌ ಸ್ಕಾರ್ಪ್ ಹಾಕಿಕೊಂಡೇ ಓಡಾಡುವ ಸ್ಥಿತಿ ಇದೆ.

ಇನ್ನು ಮಕ್ಕಳು, ವೃದ್ಧರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ನಡುವಣ ಅವಧಿಯಲ್ಲಿ ಹೊರಗೆ ಓಡಾಡದಂತೆ ಸಲಹೆ ನೀಡಲಾಗಿದೆ. ಸನ್ ಸ್ಟ್ರೋಕ್, ನಿರ್ಜಲೀಕರಣದಂತಹ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಜ್ಞರ ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ