ಡಿಕೆ ಶಿವಕುಮಾರ್ ರನ್ನು ಭೇಟಿಯಾಗಲು ಆಗಮಿಸಿದ ಬಿಜೆಪಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ
ಇವತ್ತು ಬಿಜೆಪಿಯ ಹಿರಿಯ ನಾಯಕ, ಬಳ್ಳಾರಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಸಹೋದರ ಗಾಲಿ ಸೋಮಶೇಖರ ರೆಡ್ಡಿ ಶಿವಕುಮಾರ್ ರನ್ನು ಭೇಟಿಯಾಗಲು ನಗರದ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದರು.
ಬೆಂಗಳೂರು: ಕಾಂಗ್ರೆಸ್ ನಾಯಕರು ಅಪರೇಶನ್ ಕಮಲದ (Operation Lotus) ಬಗ್ಗೆ ಮಾತಾಡುತ್ತಾರೆ. ಆದರೆ ಗಮನಿಸಬೇಕಾದ ಸಂಗತಿಯೆಂದರೆ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಅದರಲ್ಲೂ ವಿಶೇಷವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾಗುವುದು ಮುಂದುವರಿಸಿದ್ದಾರೆ. ಇವತ್ತು ಬಿಜೆಪಿಯ ಹಿರಿಯ ನಾಯಕ, ಬಳ್ಳಾರಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಸಹೋದರ ಗಾಲಿ ಸೋಮಶೇಖರ ರೆಡ್ಡಿ (Gali Somashekhar Reddy) ಶಿವಕುಮಾರ್ ರನ್ನು ಭೇಟಿಯಾಗಲು ನಗರದ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದರು. ಕಾರಣ ಏನೂಂತ ಗೊತ್ತಿಲ್ಲ, ಆದರೆ ಭೇಟಿಯಾಗಿ ಹೊರಬಂದ ಬಳಿಕ ಏನು ಹೇಳುತ್ತಾರೆ ಅಂತ ಗೊತ್ತು. ವಿಶೇಷವೇನಿಲ್ಲ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದೆ ಅನ್ನುತ್ತಾರೆ! ಶಿವಕುಮಾರ್ ನಿವಾಸದ ಹೊರಗಡೆ ಅವರು ಡಿಕೆ ಸುರೇಶ್ ಅವರೊಂದಿಗೆ ಮಾತಾಡುವುದನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ

ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
