ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಕರ್ನಾಟಕದಲ್ಲಿ ದಾಖಲಾಗಿರುವ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಪ್ರಕರಣಗಳು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಪೊಲೀಸ್ ಮಹಾನಿರ್ದೇಶಕ ಸಿಐಡಿ ಎಂ.ಎ.ಸಲೀಂ ಹೇಳಿದ್ದಾರೆ.

ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jul 17, 2023 | 9:29 AM

ಬೆಂಗಳೂರು: ಕರ್ನಾಟಕದಲ್ಲಿ ದಾಖಲಾಗಿರುವ ಒಟ್ಟು ಪೊಲೀಸ್ (Police) ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಪ್ರಕರಣಗಳು ಸೈಬರ್ ಅಪರಾಧಕ್ಕೆ (Cyber Crime) ಸಂಬಂಧಿಸಿವೆ ಎಂದು ಸಿಐಡಿ (CID) ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ (MA Salim) ಹೇಳಿದ್ದಾರೆ. ಶಿಕ್ಷಣದ ಕೊರತೆಯಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಂದ ಬಂದವರಿಂದ ಹೆಚ್ಚಿನ ಅಪರಾಧ ಪ್ರಕರಣಗಳು ವರದಿಯಾಗುತ್ತಿರುವುದು ಗಮನಾರ್ಹ ಎಂದು ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್‌ಕೆಸಿಸಿಐ) ಆಯೋಜಿಸಿದ್ದ ‘ಸೈಬರ್‌ ಭದ್ರತೆ- ಆರ್ಟಿಫಿಶಿಯಲ್​ ಪ್ರಾಮುಖ್ಯತೆಯ ಸಂಭಾವ್ಯತೆ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಸರ್ಕಾರದ ಖಾತರಿ ಯೋಜನೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹೆಸರಿನಲ್ಲಿ ನಕಲಿ ಆ್ಯಪ್‌ಗಳನ್ನು ಸೃಷ್ಟಿಸಲಾಗಿದೆ. ಮತ್ತು ಅಂತಹ ಆ್ಯಪ್‌ಗಳ ವಿರುದ್ಧ ಜಾಗೃತೆ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Cyber Crime ಮೂಲಕ ಹಣ ಕಳೆದಕೊಂಡವರಲ್ಲಿ ಬೆಂಗಳೂರಿಗರೇ ಹೆಚ್ಚು: ಕಳೆದ 4 ವರ್ಷಗಳಲ್ಲಿ 722 ಕೋಟಿ ರೂ. ವಂಚಕರ ಪಾಲು

ಸೈಬರ್‌ಬುಲ್ಲಿಂಗ್, ಟ್ರೋಲಿಂಗ್, ಸೇಡು ತೀರಿಸಿಕೊಳ್ಳುವ ಅಶ್ಲೀಲತೆ, ಸ್ಕಿಮ್ಮಿಂಗ್, ಫಿಶಿಂಗ್ ಮತ್ತು ಇತರವುಗಳಲ್ಲಿ ಅಡಿಯಲ್ಲಿ ಸುಮಾರು 45 ವಿಧದ ಸೈಬರ್‌ ಪ್ರಕರಣಗಳು ವರದಿಯಾಗಿವೆ. ಕಾಲೇಜು ಬಿಟ್ಟವರು, ಉತ್ತರ ಕರ್ನಾಟಕದಂತಹ ಪ್ರದೇಶಗಳ ನಿರುದ್ಯೋಗಿ ಯುವಕರು ಸೈಬರ್ ಅಪರಾಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸೈಬರ್ ಅಪರಾಧಗಳಲ್ಲಿ ಶ್ರೀಮಂತರು ಮಾತ್ರವಲ್ಲದೆ ಬಡವರು ಕೂಡ ಗುರಿಯಾಗುತ್ತಾರೆ ಎಂದರು.

ಸುಮಾರು 70 ಪ್ರತಿಶತ ಪ್ರಕರಣಗಳು ಪತ್ತೆಯಾಗಿವೆ. ಸೈಬರ್ ಅಪರಾಧವನ್ನು ನಿಭಾಯಿಸುವಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಆದರೆ ಇನ್ನೂ ಹೆಚ್ಚಿನ ಸುಧಾರಣೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಖಾಸಗಿ ಕಂಪನಿಗಳು ತಮ್ಮ ಡೇಟಾ ರಕ್ಷಣೆಗೆ ರಾಜಿ ಮಾಡಿಕೊಳ್ಳಬಾರದು ಮತ್ತು ಡೇಟಾ ಉಲ್ಲಂಘನೆಯನ್ನು ತಡೆಯಲು ತಮ್ಮ ಫೈರ್‌ವಾಲ್ ಸಮಗ್ರವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ್ ರೆಡ್ಡಿ ಮಾತನಾಡಿ, ಸೈಬರ್ ದಾಳಿಕೋರರು ರಾನ್ಸಮ್‌ವೇರ್ ದಾಳಿ ನಡೆಸಲು ಅತ್ಯಾಧುನಿಕ ತಂತ್ರಗಳನ್ನು ಬಳಸುತ್ತಿದ್ದಾರೆ ಮತ್ತು ರಾನ್ಸಮ್ ಮೂಲಕ ಹಣ ಗಳಿಸುತ್ತಿದ್ದಾರೆ. ತಾಂತ್ರಿಕ ಪ್ರಗತಿಯೊಂದಿಗೆ, ಸ್ವಯಂಚಾಲಿತ ಮತ್ತು ಅತ್ಯಾಧುನಿಕ ಸೈಬರ್ ದಾಳಿಗಳು ವೇಗಗೊಳ್ಳುತ್ತಿವೆ ಮತ್ತು ಸೈಬರ್ ಸುರಕ್ಷತೆ ಪರಿಹಾರಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ